ರೌಡಿಶೀಟರ್ ಕೊಲೆ ಕೇಸು 8 ಮಂದಿ ವಶ

crime scene tape of  mysterious case in cenematic tone with copy space
crime scene tape focus on word 'crime' in cenematic dark tone with copy space
Published on

ಮಂಗಳೂರು: ಕುದ್ರೋಳಿ ಕರ್ನಲ್ ಗಾರ್ಡನ್ ಬಳಿ ಬುಧವಾರ ತಡರಾತ್ರಿ ನಡೆದ ಬೊಕ್ಕಪಟ್ಣ ನಿವಾಸಿ ರೌಡಿಶೀಟರ್ ಇಂದ್ರಜಿತ್(28) ಕೊಲೆ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿಯನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇಂದ್ರಜಿತ್ ಬುಧವಾರ ರಾತ್ರಿ ಸುಮಾರು 10 ಗಂಟೆಗೆ ಮನೆಯಿಂದ ಹೊರಹೋಗಿದ್ದು, ಸ್ನೇಹಿತನೊಬ್ಬನ ವಿವಾಹದ ಮದರಂಗಿ ಶಾಸ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಅಲ್ಲಿಂದ ಮರಳಿ ಬರುವ ಸಂದರ್ಭ ಕಾದು ಕುಳಿತಿದ್ದ ಹಂತಕರು ಈ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬರ್ಕೆ ಪೊಲೀಸರು ತನಿಖೆ ಆರಂಭಿಸಿ ಸುಮಾರು 17ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. ಇವರಲ್ಲಿ 8ಮಂದಿ ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.

ಹಳೇ ದ್ವೇಷ ಕಾರಣ: ರೌಡಿಶೀಟರ್ ಇಂದ್ರಜಿತ್ ಕೊಲೆ ಹಳೇ ದ್ವೇಷದ ಹಿನ್ನೆಲೆಯಲ್ಲಿ ನಡೆದಿರುವ ಸಾಧ್ಯತೆಯಿದ್ದು, ಈ ಬಗ್ಗೆ ಪೊಲೀಸ್ ತನಿಖೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net