ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಹಿನ್ನೆಲೆ : ಮೈಸೂರು ಜೈಲು ಪರಿಶೀಲಿಸಿದ ಪೊಲೀಸ್ ಅಧಿಕಾರಿಗಳು

darshan22
Published on

ಮೈಸೂರು: ಬೆಂಗಳೂರಿನ ಪರಪ್ಪನ ಅಗ್ರಹರಾದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ದೊರೆತ್ತಿರುವ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ನಗರದ ಕೇಂದ್ರ ಕಾರಾಗೃಹದ ಸ್ಥಿತಿಗತಿ ತಿಳಿಯಲು ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಮಂಗಳವಾರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾರಾಗೃಹದ ಭದ್ರತಾ ವ್ಯವಸ್ಥೆ ಮತ್ತು ನಿಯಮಗಳ ಪಾಲನೆಯ ಮೇಲಿನ ನಿಯಂತ್ರಣವನ್ನು ಡಿಸಿಪಿ ಪರಿಶೀಲಿಸಿದರು. ಈ ಸಂದರ್ಭ ಶ್ವಾನ ದಳದೊಂದಿಗೆ ಪರಿಶೀಲನೆ ನಡೆಸಿದರು. ಜೈಲಿನ ದಿನಚರಿ, ಖೈದಿಗಳ ಚಲನವಲನ ಹಾಗೂ ಭದ್ರತೆಯ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net