

ಹುಬ್ಬಳ್ಳಿ : ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ 2 ಹಾಗೂ 10ರ ವ್ಯಾಪ್ತಿಯ ಕೆಲವು ಮಳಿಗೆಗಳಿಗೆ ಆರೋಗ್ಯ ನಿರೀಕ್ಷಕರು ಬುಧವಾರ ಭೇಟಿ ನೀಡಿ, ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡರು.
ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವ್ಯಾಪಾರಸ್ಥರಿಗೆ 33 ಸಾವಿರ ರೂ. ದಂಡ ವಿಧಿಸಿ, ನಿಷೇಧಿತ ಪ್ಲಾಸ್ಟಿಕ್ ಅನ್ನು ಮತ್ತೆ ಮಾರಾಟ ಮಾಡಿದರೆ ಟ್ರೇಡ್ ಲೈಸೆನ್ಸ್ ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದರು.
ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ನಿರ್ದೇಶನದ ಮೇರೆಗೆ ಘನತ್ಯಾಜ್ಯ ವಸ್ತು ನಿರ್ವಹಣಾ ವಿಭಾಗದ ಕಾರ್ಯನಿರ್ವಾಹಕ ಇಂನಿನಿಯರ್ ಸಂತೋಷ ಯರಂಗಳಿಯವರ ಮುಂದಾಳತ್ವದಲ್ಲಿ ಆರೋಗ್ಯ ನಿರೀಕ್ಷಕರಾದ ವಿದ್ಯಾ ಬಡಿಗೇರ, ಮಾರುತಿ ವಗರನಾಳ, ರಾಘವೇಂದ್ರ ಉಳ್ಳಿಕಾಶಿ ಹಾಗೂ ಇನ್ನಿತರರು ರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.