ಹೆದ್ದಾರಿ ಅಭಿವೃದ್ಧಿಗೆ 410 ಕೋಟಿ ರೂ. ಅನುದಾನ

Kota Shrinivasa Pujari
Published on

ಮೂಡಿಗೆರೆ: ಚಿಕ್ಕಮಗಳೂರಿನ ಮೂಗ್ತಿಹಳ್ಳಿಯಿಂದ ಮೂಡಿಗೆರೆ ಹ್ಯಾಂಡ್ ಪೋಸ್ಟ್‌ವರೆಗೆ 26ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ 410 ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದು, ಸದ್ಯದಲ್ಲೇ ರಸ್ತೆ ವಿಸ್ತರಣೆ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಣವಾರದಿಂದ ಬೇಲೂರು, ಚಿಕನಹಳ್ಳಿ ಮೂಲಕ ಮೂಡಿಗೆರೆ ಹ್ಯಾಂಡ್‌ಪೋಸ್ಟ್‌ವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ 1,200 ಕೋಟಿ ರೂ. ಬಿಡುಗಡೆಯಾಗಿದೆ. ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಭೂ ಸ್ವಾಧೀನ ಪ್ರಕ್ರಿಯೆ ಮತ್ತು ಹೆದ್ದಾರಿ ಬದಿಯ ಮರಗಳ ತೆರವು ಕಾರ್ಯ ಆರಂಭವಾಗಲಿದ್ದು, ಕಾಮಗಾರಿ ಮಳೆಗಾಲಕ್ಕೂ ಮುಂಚಿತವಾಗಿಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಡೂರಿನಿಂದ ಚಿಕ್ಕಮಗಳೂರಿನ ಮೂಗ್ತಿಹಳ್ಳಿವರೆಗೆ 45 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. ಶೃಂಗೇರಿ, ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ 169ರ ಅಭಿವೃದ್ಧಿಗೆ 520 ಕೋಟಿ ರೂ. ಮಂಜೂರಾಗಿದೆ. ಕಾಮಗಾರಿ ಆರಂಭವಾಗಲಿದೆ. ಶೃಂಗೇರಿ ಪಟ್ಟಣದಿಂದ 5 ಕಿ.ಮೀ.ಹೆದ್ದಾರಿ, ಇನ್ನೊಂದು ಹೆದ್ದಾರಿ 2 ಕಿ.ಮೀ.ಅಗಲೀಕರಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೃಂಗೇರಿಯಿಂದ ತನಿಕೋಡು ಗೇಟ್ವರೆಗೆ 8.5 ಕಿ.ಮೀ, ತನಿಕೋಡಿನಿಂದ ಮಾಳ ಗೇಟ್ವರೆಗೆ 29 ಕಿ.ಮೀ. ಹೆದ್ದಾರಿ ಅಭಿವೃದ್ಧಿಗೆ 520 ಕೋಟಿ ರೂ. ಎಸ್.ಕೆ. ಬಾರ್ಡರ್‌ನಿಂದ ಮಾಳದವರೆಗೆ 10 ಕಿ.ಮೀ. ಹೆದ್ದಾರಿ ಅಭಿವೃದ್ಧಿಗೆ ಮಂಜೂರಾತಿ ದೊರೆತಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಬಾಕಿ ಉಳಿದಿದೆ. ಚಿಕ್ಕಮಗಳೂರಿನಿಂದ ನದೀಪುರದವರೆಗಿನ 70 ಕಿ.ಮೀ. ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು ಎಂದರು.

ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜೆ.ಎಸ್.ರಘು, ಜಿಲ್ಲಾ ವಕ್ತಾರ ನಯನ ತಳವಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net