ಕಾಂಗ್ರೆಸ್‌ಗೆ ಸಂಬಂಧವಿಲ್ಲ, 42 ಕೋಟಿ ರೂ. ವಶ ಪ್ರಕರಣಕ್ಕೆ ಚೆಲುವರಾಯಸ್ವಾಮಿ ಪ್ರತಿಕ್ರಿಯೆ

sachiva
Published on

ಉಡುಪಿ: ಗುತ್ತಿಗೆದಾರರೊಬ್ಬರ ಮನೆಯಲ್ಲಿ 42 ಕೋಟಿ ರೂ. ಸಿಕ್ಕಿರುವುದಕ್ಕೂ ಕಾಂಗ್ರೆಸ್ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು. ಬ್ರಹ್ಮಾವರದ ಚೇರ್ಕಾಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಸುದ್ದಿಗಾರರ ಜತೆ ಮಾತನಾಡಿದರು.

ಗುತ್ತಿಗೆದಾರರ ಮನೆಯಲ್ಲಿ 42 ಕೋಟಿ ರೂ. ಅಕ್ರಮ ಹಣ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷರು ಮಾತನಾಡಿದ್ದಾರೆ. ಅವರ ಸರ್ಕಾರದ ಅವಧಿಯಲ್ಲೇ ಭ್ರಷ್ಟಾಚಾರಿಗಳು ಸಿಕ್ಕಿಬಿದ್ದಿದ್ದರು. ಆಗ ಅವರು ಸಿಎಂ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರಾ? ಈಗ ಕೇಂದ್ರ ತನಿಖಾ ತಂಡ ತನಿಖೆ ನಡೆಸುತ್ತಿದೆ. ಅವರ ಬಳಿ ದಾಖಲೆಯಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು. ಬಿಜೆಯವರಿಗೆ ಬೇರೆ ಕೆಲಸ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಯಿಂದ ಅವರು ಕಂಗಾಲಾಗಿದ್ದಾರೆ. ಹೀಗಾಗಿ ಏನೇ ಘಟಿಸಿದರೂ ಅದನ್ನು ಕಾಂಗ್ರೆಸ್‌ನತ್ತ ಬೊಟ್ಟು ತೋರಿಸಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net