ಘಾಟಿ ಹುಂಡಿಯಲ್ಲಿ ರೂ.64,51,009 ಸಂಗ್ರಹ

28 03 2025_BGR RURAL_PAGE_3
ದೊಡ್ಡಬಳ್ಳಾಪುರ ತಾಲೂಕು ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಯಿತು.
Published on

ತೂಬಗೆರೆ : ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಘಾಟಿ ಸುಬ್ರಹ್ಮಣ್ಯ ಸ್ವಾಮಿ ೇತ್ರದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ಮಾಡಲಾಯಿತು. ಒಟ್ಟು 64,51,009 ರೂಪಾಯಿ ಹುಂಡಿಯಲ್ಲಿ ಸಂಗ್ರಹವಾಗಿದೆ. ಇದರೊಂದಿಗೆ 44,100 ರೂ. ಮೌಲ್ಯದ 7 ಗ್ರಾಂ ಚಿನ್ನ, 77,500 ರೂ. ಮೌಲ್ಯದ 1.550 ತೂಕದ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕಿ ಹರಕೆ ತೀರಿಸಿದ್ದಾರೆ.

ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿ.ಎನ್​.ರಂಗಪ್ಪ, ಕೆ.ಎಸ್​.ರವಿ, ಲಕ್ಷ$್ಮಣ ನಾಯಕ್​, ಆರ್​.ವಿ.ಮಹೇಶ್​ ಕುಮಾರ್​, ಹೇಮಲತಾ ರಮೇಶ್​, ಪ್ರಧಾನ ಅರ್ಚಕ ಆರ್​.ಸುಬ್ರಹ್ಮಣ್ಯ, ದೇವಾಲಯದ ಸಿಬ್ಬಂದಿ, ಪೊಲೀಸ್​ ಇಲಾಖೆ, ಕೆನರಾ ಬ್ಯಾಂಕ್​ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net