ತುಮಕೂರು ಸಿದ್ದಗಂಗಾ ಮಠಕ್ಕೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ

bagwat
Mohan Bhagwat In Siddaganga Mutt
Published on

ತುಮಕೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್)ದ ಸರ ಸಂಘಚಾಲಕ ಮೋಹನ್ ಭಾಗವತ್ ಅವರು ಇಂದು ಸಂಜೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು, ಪೂಜೆ ಸಲ್ಲಿಸಿದರು.

ಸಂಜೆ ಶ್ರೀಮಠಕ್ಕೆ ಭೇಟಿ ನೀಡಿದ ಮೋಹನ್ ಭಾಗವತ್ ಅವರು ಶ್ರೀಗಳ ಗದ್ದುಗೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಕಲ್ಲಡ್ಕ ಪ್ರಭಾಕರ್ ಭಟ್ ಮತ್ತಿತರರು ಇದ್ದರು. ನಂತರ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಹಿಂದು ಧರ್ಮದ ಕುರಿತು, ಶ್ರೀಮಠದ ಧಾರ್ಮಿಕ ಕಾರ್ಯದ ಬಗ್ಗೆ ಚರ್ಚಿಸಿದರು.

ಬೌದ್ಧಿಕ್ ವರ್ಗದಲ್ಲಿ ಭಾಗಿ: ನಗರದ ಕೋತಿತೋಪು ರಸ್ತೆಯಲ್ಲಿ ನಿರ್ಮಿಸಿರುವ ಆರ್ ಎಸ್ ಎಸ್ ನ ಸಾಧನಾ ಕಟ್ಟಡದ ಪ್ರವೇಶೋತ್ಸವ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಮುಖಂಡರು, ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಬೌದ್ಧಿಕ್ ವರ್ಗದ ಅಧ್ಯಕ್ಷತೆವಹಿಸಿ ಮೋಹನ್ ಭಾಗವತ್ ಅವರು ಮಾತನಾಡಿದರು.

ಜಿಲ್ಲಾ ಸಂಚಾಲಕ ಎನ್. ಎಸ್. ನಾಗೇಂದ್ರ ಪ್ರಸಾದ್, ಆರ್ ಎಸ್ ಎಸ್ ಪ್ರಮುಖರು ಉಪಸ್ಥಿತರಿದ್ದರು. ಮೋಹನ್ ಭಾಗವತ್ ಆಗಮನ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net