ಓಟ್‌ಬ್ಯಾಂಕ್‌ಗೆ ಜೊಲ್ಲುಸುರಿಸುತ್ತಿರುವ ಕುಮಾರಸ್ವಾಮಿ: ಗೃಹ ಸಚಿವ ಅರಗ ಜ್ಞಾನೇಂದ್ರ

IMG-20211009-WA0019
Published on

ಉಡುಪಿ: ಆರೆಸ್ಸೆಸ್ ಬಗ್ಗೆ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿ ತಿಳಿದಿದೆ. ಆದರೆ ಓಟ್ ಬ್ಯಾಂಕ್‌ಗೆ ಜೊಲ್ಲು ಸುರಿಸುತ್ತಿರುವವರು ಟೀಕೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.


ಉಡುಪಿಯಲ್ಲಿ ಪೊಲೀಸ್ ವಸತಿ ಗೃಹ ಉದ್ಘಾಟಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು. ಓಟು ಬ್ಯಾಂಕ್ ಕಿತ್ತುಕೊಳ್ಳುವ ವಿಚಾರದಲ್ಲಿ ಇಬ್ಬರ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ನಾನು ಆರೆಸ್ಸೆಸ್, ದೇಶದ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಎಲ್ಲರೂ ಆರೆಸ್ಸೆಸ್‌ನಿಂದ ಬಂದವರು. ಜನ ನಮ್ಮನ್ನು ಆಯ್ಕೆ ಮಾಡಿಲ್ಲವೇ ಎಂದು ಪ್ರಶ್ನಿಸಿದರು.


ಮತಾಂತರ ನಿಷೇಧ ಕಾಯ್ದೆ ಜಾರಿ
ಈಗಿರುವ ಕಾನೂನಿನಲ್ಲೇ ಮತಾಂತರ ತಡೆಯಲು ಸಾಧ್ಯವಿದೆ. ಅದರಲ್ಲಿರುವ ಲೋಪದೋಷ ಸರಿಪಡಿಸಲು ಶೀಘ್ರದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ. ಗೋಹತ್ಯೆ ನಿಷೇಧ ಕಾಯ್ದೆ ವಿಫಲವಾಗಿಲ್ಲ. ಈ ಬಗ್ಗೆ ಪೊಲೀಸರಿಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.


ಬಂಟ್ವಾಳದಲ್ಲಿ 16 ವರ್ಷದ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net