ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್​ ಭಟ್​ಗೆ ಎದೆನೋವು, ಆಸ್ಪತ್ರೆಗೆ ದಾಖಲು..

KALLADKA
Published on

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಎದೆನೋವಿಗೆ ಒಳಗಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.

ಇಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಂಜೆಯ ಸುಮಾರಿಗೆ ಎದೆನೋವು ಉಂಟಾಗಿದೆ. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಇದೆ. ತಜ್ಞ ವೈದ್ಯರಿಂದ ಪ್ರಭಾಕರ್ ಭಟ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರಿಂದ ಮಾಹಿತಿ ಲಭಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net