ನಗರದಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ: ದಾರಿಯುದ್ದಕ್ಕೂ ಮೊಳಗಿದ ೋಷಣೆ

RSS Path Movement Mandya
Published on

ಮಂಡ್ಯ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಸ್ಥಾಪನೆಯಾಗಿ ನೂರು ವರ್ಷ ಪೂರೈಸಿದ ಹಿನ್ನೆಲೆ ಹಾಗೂ ವಿಜಯದಶಮಿ ಹಬ್ಬದ ಅಂಗವಾಗಿ ನಗರದಲ್ಲಿ ಸ್ವಯಂ ಸೇವಕರು ಆಕರ್ಷಕ ಪಥ ಸಂಚಲನ ನಡೆಸಿದರು.

ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬಳಿ ಸಮಾವೇಶಗೊಂಡ ಗಣವೇಷಧಾರಿಗಳು ಸ್ಥಳದಲ್ಲಿ ಧ್ವಜವಂದನೆ ಸಲ್ಲಿಸಿದ ಬಳಿಕ ಪಥ ಸಂಚಲನ ಆರಂಭಿಸಿದರು. ಸರತಿ ಸಾಲಿನಲ್ಲಿ ನಿಂತ ಶಿಸ್ತಿನ ಸಿಾಯಿಗಳಂತೆ ಸಾಗಿದರು. ದೇವಸ್ಥಾನದಿಂದ ಪ್ರಾರಂಭವಾದ ಪಥ ಸಂಚಲನ ವಿನೋಭ ರಸ್ತೆ, ಮೈಸೂರು-ಬೆಂಗಳೂರು ಹೆದ್ದಾರಿ, ಜೆ.ಸಿ ವೃತ್ತ, ಮಹಾವೀರ ವೃತ್ತ, ವಿಶ್ವೇಶ್ವರಯ್ಯ ರಸ್ತೆ, ಹೊಸಹಳ್ಳಿ ವೃತ್ತ, ನೂರಡಿ ರಸ್ತೆ ಮಾರ್ಗವಾಗಿ ಸಾಗಿ ಮತ್ತೆ ಕನ್ನಿಕಾ ಪರಮೇಶ್ವರಿ ದೇವಾಲಯದ ಬಳಿ ತಲುಪಿ ಸಂಪನ್ನಗೊಂಡಿತು.

ಗಣವೇಷಧಾರಿಗಳು ಶಿಸ್ತಿನ ಶಿಪಾಯಿಗಳಂತೆ ರಸ್ತೆಯಲ್ಲಿ ಸಾಗುತ್ತಿದ್ದಾಗ ನಾಗರಿಕರು ಮಹಡಿಗಳ ಮೇಲಿನಿಂದ ಹಾಗೂ ತಮ್ಮ ಮನೆ ಬಳಿ ನಿಂತು ಪುಷ್ಪವೃಷ್ಠಿ ಸಲ್ಲಿಸಿದರು. ಕೆಲವೆಡೆ ರಸ್ತೆಯುದ್ದಕ್ಕೂ ಜನಸಾಮಾನ್ಯರು, ಅಂಗಡಿ ಮುಂಗಟ್ಟು ಮಾಲೀಕರು, ಸಿಬ್ಬಂದಿ ಪುಷ್ಪಾರ್ಚನೆ ಮಾಡಿದರು. ವಿದ್ಯಾಗಣಪತಿ ದೇವಾಲಯದ ಬಳಿ ಮಹಿಳಾ ಮಂಡಳಿಯಿಂದ ಭಾರತದ ಮಾತೆಯ ಭಾವಚಿತ್ರವನ್ನಿಟ್ಟು ಪೂಜೆ ಸಲ್ಲಿಸಿದರು. ಗಣವೇಷಧಾರಿಗಳು ಈ ಮಾರ್ಗದಲ್ಲಿ ಬರುತ್ತಿದ್ದಂತೆ ಅವರ ಮೇಲೆ ಪುಷ್ಪಾರ್ಚನೆ ಮಾಡಿದರಲ್ಲದೆ, ಭಾರತ್ ಮಾತಾಕೀ ಜೈ ಎಂಬ ಘೋಷಣೆ ಮೊಳಗಿಸಿದರು.

ಮಾರ್ಗದಲ್ಲಿ ಸಾಗುತ್ತಿದ್ದ ಸ್ವಯಂ ಸೇವಕರಿಗೆ ಹೊಸಹಳ್ಳಿ ವೃತ್ತದಲ್ಲಿ ಮಹಿಳೆಯರು ಭಾರತ್ ಮಾತಾಕೀ ಜೈ ಎಂಬ ಘೋಷಣೆಯನ್ನು ಮೊಳಗಿಸಿದರು. ಗಣವೇಷಧಾರಿಗಳು ಸಾಗುತ್ತಿದ್ದ ಮಾರ್ಗದಲ್ಲಿ ಪೊಲೀಸರು ವಾಹನ ಸಂಚಾರ ನಿರ್ಬಂಧಿಸಿದ್ದರು. ಸ್ವಯಂಸೇವಕರು ತೆರಳಿದ ನಂತರ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು. ಸ್ವಯಂ ಸೇವಕರು ತೆರಳುವ ಮಾರ್ಗದುದ್ದಕ್ಕೂ ಕೇಸರಿ ಬಣ್ಣದ ತೋರಣಗಳಿಂದ ಅಲಂಕರಿಸಲಾಗಿತ್ತು. ಪಥಸಂಚಲನ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಎಲ್ಲಿಯೂ ಯಾವುದೇ ಗೊಂದಲ-ಗದ್ದಲಗಳಿಗೆ ಅವಕಾಶವಿಲ್ಲದಂತೆ ಸ್ವಯಂ ಸೇವಕರು ತಮ್ಮ ಮಾರ್ಗದಲ್ಲಿ ಸಾಗಿದರು. ಇದರಲ್ಲಿ ಪುಟಾಣಿ ಮಕ್ಕಳಿಂದ ಹಿಡಿದು, ಯುವಕರು, ವಯಸ್ಕರು, ವೃದ್ಧರು, ಪ್ರಮುಖರೂ ಸಹ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net