

ಧಾರವಾಡ: ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಧಾರವಾಡ ನಗರ ಘಟಕದಿಂದ ಅ. 12ರಂದು ಮದ್ಯಾಹ್ನ 3 ಗಂಟೆಗೆ ನಗರದಲ್ಲಿ ಬೃಹತ್ ಪಥಸಂಚಲನ ನಡೆಯಲಿದೆ. ಸವದತ್ತಿ ರಸ್ತೆಯ ಕೆ.ಇ. ಬೋರ್ಡ್ಸ್ ಕಾಲೇಜು ಮೈದಾನದಿಂದ ಆರಂಭಗೊಳ್ಳುವ ಪಥಸಂಚಲನವು ಮೂರು ಮಾರ್ಗಗಳಲ್ಲಿ ಸಂಚರಿಸಿ ಧಾರವಾಡ ಕೆಸಿಡಿ ಮೈದಾನದಲ್ಲಿ ಸಮಾವೇಶಗೊಳ್ಳಲಿದೆ.
ಆರ್‌ಎಸ್‌ಎಸ್ ಗಣವೇಷಾಧಾರಿ ಸ್ವಯಂ ಸೇವಕರು ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.30ಕ್ಕೆ ಕೆ.ಸಿ.ಡಿ ಮೈದಾನದಲ್ಲಿ ಸಾರ್ವನಿಕ ಸಮಾರಂಭ ನಡೆಯಲಿದೆ. ಕೃಷಿ ವಿಶ್ವವಿದ್ಯಾಲಯದ ಸಹಾಯಕ ಪ್ರಾದ್ಯಾಪಕ ಡಾ. ರವಿಕುಮಾರ ಹೊಸಮನಿ ಅತಿಥಿಯಾಗಿ ಪಾಲ್ಗೊಳ್ಳುವರು. ಸಂಘದ ಪ್ರಾಂತ ಬೌದ್ಧಿಕ ಪ್ರಮುಖ ದುರ್ಗಣ್ಣ ಭಾಗವಹಿಸುವರು.