ರುದ್ರೇಶ್ವರ ಸ್ವಾಮಿ ಕೊಂಡೋತ್ಸವ

1
ರುದ್ರೇಶ್ವರ ಸ್ವಾಮಿಯನ್ನು ಅಲಂಕರಿಸಿರುವುದು.
Published on

ಅರಸೀಕೆರೆ: ತಾಲೂಕಿನ ಬಾಣಾವರ ಗ್ರಾಮದಲ್ಲಿ ಶ್ರೀ ರುದ್ರೇಶ್ವರ ಸ್ವಾಮಿ ಕೊಂಡೋತ್ಸವ ಸೋಮವಾರ ಭಕ್ತರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು.

ಮಹಾರುದ್ರಹೋಮ, ಬಿಲ್ವಾರ್ಚನೆ, ಮಹಾ ಮಂಗಳಾರತಿ ನೆರವೇರಿಸಿದ ಬಳಿಕ ಕೊಂಡ ಹಾಯುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ರುದ್ರೇಶ್ವರ ಸ್ವಾಮಿ, ಬಸವೇಶ್ವರ ಹಾಗೂ ನೀಲಮ್ಮ ದೇವಿಯ ಉತ್ಸವ ಕಣ್ತುಂಬಿಕೊಳ್ಳಲು ಭಕ್ತ ಸಮೂಹವೇ ಹರಿದು ಬಂದಿತ್ತು.

ದೇವಾಲಯ ಸಮಿತಿ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು. ಮಲ್ಲಾಪುರ, ಸಾಲಾಪುರ, ಮನಕತ್ತೂರು, ಶಾನೆಗರೆ, ತೊಂಡಿಗನಹಳ್ಳಿ, ಚಿಕ್ಕಾರೆಹಳ್ಳಿ, ಭೈರಾಪುರ, ಬಸವನಹಳ್ಳಿ, ಎತ್ತಿನಮನೆ, ಬಾಗಿಲುಘಟ್ಟ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net