ಕೌಶಲಗಳಿದ್ದರೆ ಬದುಕಿನಲ್ಲಿ ಯಶಸ್ಸು : ಡಾ.ಬಿ.ಎ. ಕುಮಾರ್ ಹೆಗ್ಡೆ ಅನಿಸಿಕೆ

rudset
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ನಮ್ಮ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಇರುವುದರಿಂದ ಜೀವನದಲ್ಲಿ ನಾವು ಯಾವ ರೀತಿಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದೇವೆ ಅನ್ನುವುದರ ಮೂಲಕ ನಮ್ಮ ಯಶಸ್ಸು ನಿರ್ಧಾರವಾಗುತ್ತದೆ. ಸ್ವಯಂಶಿಸ್ತು ಅಳವಡಿಸಿಕೊಂಡು ಉತ್ತಮ ಆಚಾರ, ವಿಚಾರಗಳನ್ನು ಅನುಸರಿಸಿ,ಉತ್ತಮವಾದ ಆಹಾರ ಪದ್ಧತಿ ಅಳವಡಿಸಿಕೊಂಡರೆ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಶುಂಪಾಲ ಡಾ. ಬಿ. ಎ. ಕುಮಾರ್ ಹೆಗ್ಡೆ ಹೇಳಿದರು.

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 30 ದಿನ ನಡೆದ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್‌ಸೆಟ್ ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿ ಮಾತನಾಡಿ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ರುಡ್‌ಸೆಟ್ ಸಂಸ್ಥೆಯಲ್ಲಿ ಅತ್ಯತ್ತುಮವಾದ ತರಬೇತಿ ಪಡೆದುಕೊಂಡಿದ್ದೀರಿ, ಅದನ್ನು ಸ್ವಉದ್ಯೋಗದಲ್ಲಿ ಉಪಯೋಗಿಸಿಕೊಂಡು ಯಶಸ್ವಿಗಳಿಸಿ ಎಂದು ಹಾರೈಸಿದರು.

ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ಅಧ್ಯಕ್ಷತೆ ವಹಿಸಿ, ಮಾತನಾಡಿ ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಕೆ.ಕರುಣಾಕರ ಜೈನ್ ವಂದಿಸಿದರು. 27 ಶಿಬಿರಾರ್ಥಿಗಳು ಭಾಗವಹಿಸಿದ್ದರು, ಗಣೇಶ್, ರಮೇಶ್, ಗುರುಕಿರಣ್ ತರಬೇತಿಯ ಅನುಭವ ಹಂಚಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net