ನಿಯಮ ಉಲ್ಲಂಘಿಸಿ ರಸ್ತೆ ಬದಿ ನಿಂತಿದ್ದ ಟ್ರಾೃಕ್ಟರ್‌ಗೆ ಬೈಕ್ ಡಿಕ್ಕಿ; ಸವಾರ ಸಾವು

Crime Logo
Published on

ರಾಣೆಬೆನ್ನೂರ: ನಿಂತಿದ್ದ ಟ್ರಾೃಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ಹಲಗೇರಿ ಗ್ರಾಮದ ಬಳಿ ಸೋಮವಾರ ಸಂಭವಿಸಿದೆ.
ನಗರದ ತಳವಾರ ಓಣಿಯ ಪ್ರತಾಪ ರವಿಕುಮಾರ ಬನ್ನಿಕಟ್ಟಿ (30) ಮೃತ ಬೈಕ್ ಸವಾರ.
ಈತ ಕೋಡ ಗ್ರಾಮದ ಕಡೆಯಿಂದ ಹಲಗೇರಿ ಕಡೆಗೆ ಬರುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ಸಂಚಾರ ನಿಯಮ ಉಲ್ಲಂಘಿಸಿ ರಸ್ತೆ ಬದಿ ನಿಲ್ಲಿಸಿದ್ದ ಟ್ರಾೃಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net