ರನ್ನಬೆಳಗಲಿ ಪಪಂ ಚುನಾವಣೆ ರೂಪಾ ಹೊಸಟ್ಟಿ ಅಧ್ಯಕ್ಷೆ, ಸಹನಾ ಸಾಂಗಲಿಕರ ಉಪಾಧ್ಯಕ್ಷ

Runnabelagali papam election Rupa Hosatti is the president, Sahana Sangalikar is the vice president
ರನ್ನಬೆಳಗಲಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಪಪಂ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ರೂಪಾ ಹೊಸಟ್ಟಿ, ಸಹನಾ ಸಾಂಗಲಿಕರ ಅವರನ್ನು ಸನ್ಮಾನಿಸಲಾಯಿತು. ಸಂಸದ ಪಿ.ಸಿ.ಗದ್ದಿಗೌಡರ, ಸಿದ್ದುಗೌಡ ಪಾಟೀಲ ಇದ್ದರು.
Published on

ಮಹಾಲಿಂಗಪುರ: ಸಮೀಪದ ರನ್ನಬೆಳಗಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ರೂಪಾ ಹೊಸಟ್ಟಿ, ಉಪಾಧ್ಯಕ್ಷರಾಗಿ ಸಹನಾ ಸಾಂಗಲಿಕರ ಆಯ್ಕೆಯಾಗಿದ್ದಾರೆ.

ಕಾರ್ಯಾಲಯ ಸಭಾಭವನದಲ್ಲಿ ಮಂಗಳವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಹಿಂದುಳಿದ ವರ್ಗ ಅ ಸ್ಥಾನಕ್ಕೆ ಮೀಸಲಾಗಿದ್ದ ಪಪಂ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳಾದ ಗೌರವ್ವ ಅಮಾತಿ, ನೀಲಕಂಠ ಸೈದಾಪುರ ಮತ್ತು ಬಿಜೆಪಿ ಅಭ್ಯರ್ಥಿ ರೂಪಾ ಹೊಸಟ್ಟಿ ನಾಮಪತ್ರ ಸಲ್ಲಿಸಿದರು. ಹಿಂದುಳಿದ ವರ್ಗ ಬ ಮಹಿಳೆೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಸಹನಾ ಸಾಂಗಲಿಕರ ಒಬ್ಬರೇ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ನೀಲಕಂಠ ಸೈದಾಪುರ ನಾಮಪತ್ರ ಹಿಂಪಡೆದಿದ್ದರಿಂದ ಇಬ್ಬರ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿತ್ತು.

ಒಟ್ಟು 18 ಸದಸ್ಯ ಬಲದ ಪಂಚಾಯಿತಿಯಲ್ಲಿ ಬಿಜೆಪಿ ಅಭ್ಯರ್ಥಿ ರೂಪಾ ಹೊಸಟ್ಟಿ ಅವರು ಬಿಜೆಪಿಯ 5, ಪಕ್ಷೇತರ 3, ಕಾಂಗ್ರೆಸ್‌ನ ಸಹನಾ ಸಾಂಗಲಿಕರ, ದ್ರಾಕ್ಷಾಯಿಣಿ ಮುರನಾಳ ಮತ್ತು ಸಂಸದ ಪಿ.ಸಿ.ಗದ್ದಿಗೌಡರ ಮತ ಸೇರಿ 11 ಮತ ಪಡೆದು ಅಧ್ಯಕ್ಷರಾಗಿ ಗೆಲುವಿನ ನಗೆ ಬೀರಿದರು. ಕಾಂಗ್ರೆಸ್ ಅಭ್ಯರ್ಥಿ ಗೌರವ್ವ ಅಮಾತಿ ಕಾಂಗ್ರೆಸ್ 6, ಪಕ್ಷೇತರ 2, ಸಚಿವ, ಕ್ಷೇತ್ರದ ಶಾಸಕ ಆರ್.ಬಿ. ತಿಮ್ಮಾಪೂರ ಅವರ ಮತ ಸೇರಿ 9 ಮತ ಪಡೆದು ಪರಾಭವಗೊಂಡರು.

ಉಪಾಧ್ಯಕ್ಷರಾಗಿ ಸಹನಾ ಸಾಂಗಲಿಕರ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಮುಧೋಳ ತಹಸೀಲ್ದಾರ್ ವಿನೋದ ಹತ್ತಳ್ಳಿ ಕಾರ್ಯನಿರ್ವಹಿಸಿದರು. ಪಪಂ.ಮುಖ್ಯಾಧಿಕಾರಿ ಎನ್.ಎ.ಲಮಾಣಿ, ಉಪತಹಸೀಲ್ದಾರ್ ಆರ್.ಡಿ. ನಾಯಕ, ಕಂದಾಯ ನಿರೀಕ್ಷಕರಾದ ಪ್ರಕಾಶ ಕುಂದರಗಿ, ಗ್ರಾಮ ಆಡಳಿತಾಧಿಕಾರಿ ಬಿ.ಎಂ. ಪಾಟೀಲ ಉಪಸ್ಥಿತರಿದ್ದರು.

ಬಿಜೆಪಿ ಮುಖಂಡರ ವಿಜಯೋತ್ಸವ: ಬಿಜೆಪಿ ಅಭ್ಯರ್ಥಿ ಪಪಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರಿಂದ ಸಂಸದ ಪಿ.ಸಿ.ಗದ್ದಿಗೌಡರ ನೇತತ್ವದಲ್ಲಿ ಬಿಜೆಪಿ ಸದಸ್ಯರು, ಮುಖಂಡರು ಬಂದಲಕ್ಷ್ಮೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಿಜಯೋತ್ಸವ ಆಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net