‘ದೇಸಿ ಅಕ್ಕಿ ಮೇಳ’ ಚಾಲನೆ

8
Published on

ಮೈಸೂರು: ದೇಸಿ ತಳಿಯ ಬಿತ್ತನೆ ಬೀಜಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೂ ಉಳಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.

ಸಹಜ ಸಮೃದ್ಧ ವತಿಯಿಂದ ನಗರದ ನಂಜರಾಜ ಬಹದ್ದೂರ್ ಕಲ್ಯಾಣ ಮಂಟಪದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ‘ದೇಸಿ ಅಕ್ಕಿ ಮೇಳ’ ಉದ್ಘಾಟಿಸಿ ಮಾತನಾಡಿದರು.

ಸೂಕ್ತ ಬೆಲೆ ಇಲ್ಲದ ಕಾರಣ ದೇಸಿ ಆಹಾರ ಧಾನ್ಯಗಳ ತಳಿಗಳು ನಾಶವಾಗುತ್ತಿವೆ. ರಾಸಾಯನಿಕ ಗೊಬ್ಬರ ಸಿಂಪಡಿಸಿ ಬೆಳೆದ ಆಹಾರವನ್ನು ಸೇವಿಸುವುದರಿಂದ ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬೀರುತ್ತಿದೆ. ಆದ್ದರಿಂದ ರಾಸಾಯನಿಕ ಬೆಳೆಗಳನ್ನು ಕೈಬಿಟ್ಟು ಸಾವಯವ ಕೃಷಿಯತ್ತ ಸಾಗಬೇಕಿರುವುದು ಅನಿವಾರ್ಯವಾಗಿದೆ. ಸಾವಯವ ಕೃಷಿ ಆಧಾರಿತ ಆಹಾರ ಸೇವನೆಯಿಂದ ನಮ್ಮ ಆರೋಗ್ಯ ವೃದ್ಧಿಸುತ್ತದೆ ಎಂದು ಸಲಹೆ ನೀಡಿದರು.

ಕೇಂದ್ರೀಯ ಆಹಾರ ಸಂಶೋಧನಾಲಯದ ನಿರ್ದೇಶಕಿ ಡಾ.ಶ್ರೀದೇವಿ ಅನ್ನಪೂರ್ಣ ಸಿಂಗ್, ಭತ್ತದ ತಳಿ ಸಂರಕ್ಷಕರಾದ ಗೀತಾ, ಶ್ರೀನಿವಾಸಮೂರ್ತಿ, ರೋಟರಿ ಮೈಸೂರು ಉತ್ತರದ ಅಧ್ಯಕ್ಷ ಎಂ.ಕೆ.ಶ್ರೀಧರ್, ಬೋರೇಗೌಡ, ಸಹಜ ಸಮೃದ್ಧ ನಿರ್ದೇಶಕ ಜಿ. ಕೃಷ್ಣ ಪ್ರಸಾದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net