ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿ

25 HDLP 02
ಹೂವಿನಹಡಗಲಿಯ ತಾಪಂ ಕಚೇರಿ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ತಾಪಂ ಇಒ ಎಂ.ಉಮೇಶ ಮಾತನಾಡಿದರು. ನರೇಗಾ ಎಡಿ ವೀರಣ್ಣನಾಯ್ಕ, ತಾಪಂ ಸಹಾಯಕ ಲೆಕ್ಕಾಧಿಕಾರಿ ಮಧುಸೂದನ್ ಇತರರಿದ್ದರು.
Published on

ಹೂವಿನಹಡಗಲಿ: ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಗ್ರಾಮೀಣ ಭಾಗದ ಪ್ರತಿ ಮನೆಗೂ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಾಪಂ ಇಒ ಎಂ.ಉಮೇಶ ಹೇಳಿದರು.

ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳನ್ನು ಸ್ವಚ್ಛವಾಗಿಡುವುದರಿಂದ ಆರೋಗ್ಯಯುತ ಜೀವನ ನಿರ್ವಹಿಸಬಹುದಾಗಿದೆ. ಬಯಲು ಶೌಚಮುಕ್ತ ಗ್ರಾಮಗಳನ್ನು ನಿರ್ಮಾಣ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ನಮ್ಮ ಸುತ್ತಲಿನ ಪ್ರದೇಶದಲ್ಲಿ ಅನೈರ್ಮಲ್ಯ ಉಂಟಾಗಿ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಗಟ್ಟಬೇಕು ಎಂದರು.

ತಾಪಂ ಕಚೇರಿ ಆವರಣದಲ್ಲಿರುವ ಅನುಪಯುಕ್ತ ಸಾಮಗ್ರಿಗಳನ್ನು ವಿಲೇವಾರಿ ಮಾಡಲಾಯಿತು. ಆವರಣದ ಶೌಚಗೃಹ, ಸಖಿ ಕೊಠಡಿ, ಸಭಾ ಕೊಠಡಿ ಸೇರಿ ಇತರ ಎಲ್ಲ ಕೊಠಡಿಗಳನ್ನು ಸ್ವಚ್ಛಗೊಳಿಸಲಾಯಿತು.

ನರೇಗಾ ಸಹಾಯಕ ನಿರ್ದೇಶಕ ವೀರಣ್ಣನಾಯ್ಕ, ತಾಪಂ ಸಹಾಯಕ ಲೆಕ್ಕಾಧಿಕಾರಿ ಮಧುಸೂದನ್, ಬಿಸಿಯೂಟ ಸಹಾಯಕ ನಿರ್ದೇಶಕ ಹನುಮಂತಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net