ರೂರಲ್ ಬಿ.ಇಡಿ ಕಾಲೇಜಿನ ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ

IMG-20250321-WA0003_1-1.jpg
Published on

ಧಾರವಾಡ: ಸತ್ತೂರಿನ ಶ್ರೀ ಬಸವೇಶ್ವರ ರೂರಲ್ ಎಜ್ಯುಕೇಶನ್ ಹಾಗೂ ಡೆವಲಪಮೆಂಟ್ ಟ್ರಸ್ಟನ ರೂರಲ್ ಬಿ.ಇಡಿ ಕಾಲೇಜು ಹಾಗೂ ವಿ.ಎಚ್. ಮರದ ಸ್ನಾತಕೋತ್ತರ ಶಿಕ್ಷಣ ವಿಭಾಗದ ವತಿಯಿಂದ ಕಾಲೇಜಿನಲ್ಲಿ ಮಾ. ೨೨ ರಂದು ಬೆಳಗ್ಗೆ ೧೦.೩೦ಕ್ಕೆ ಪ್ರಸಕ್ತ ಸಾಲಿನ ಬಿ.ಇಡಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ.

ರಂಗಾಯಣ ನಿರ್ದೇಶಕ ಡಾ. ರಾಜು ತಾಳಿಕೋಟಿ ಕಾರ್ಯಕ್ರಮ ಉದ್ಘಾಟಿಸುವರು. ಟ್ರಸ್ಟ ಅಧ್ಯಕ್ಷ ಡಾ. ಶರಣಪ್ಪ ಕೊಟಗಿ ಅಧ್ಯಕ್ಷತೆ ವಹಿಸುವರು.

ಕವಿವಿ ಶಿಕ್ಷಣ ನಿಕಾಯ ಮುಖ್ಯಸ್ಥ ಡಾ. ಅರವಿಂದ ಕರಬಸನಗೌಡರ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಾಚಾರ್ಯ ಡಾ. ಮಹಾಂತೇಶ ಹಿರೇಮಠ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net