

ಸಿರಿಗೆರೆ: ಗ್ರಾಮಾಭಿವೃದ್ಧಿ ಮೂಲಕ ರಾಷ್ಟ್ರ ಪ್ರಗತಿ ಹೊಂದಲು ಸಾಧ್ಯವಿದೆ ಎಂದು ಶಾಸಕ ಕೆ.ಸಿ. ವೀರೇಂದ್ರಪಪ್ಪಿ ಹೇಳಿದರು.
ಸಮೀಪದ ಆಲಘಟ್ಟದಲ್ಲಿ 2 ಕೋಟಿ ರೂ. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮೀಣಾಭಿವೃದ್ಧಿ ಸಂಕಲ್ಪದೊಂದಿಗೆ ಕ್ಷೇತ್ರದ ಎಲ್ಲೆಡೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದೇನೆ ಎಂದು ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡುತ ತಿದ್ದೇನೆ. ಜನರ ಅವಶ್ಯಕತೆಗಳನ್ನು ಪೂರೈಸುವುದು ಶಾಸಕನಾಗಿ ನನ್ನ ಕರ್ತವ್ಯ ಎಂದರು.
ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಈಗಾಗಲೇ ನಡೆದಿದೆ. ಸರ್ಕಾರದಿಂದ ವಿಶೇಷ ಅನುದಾನಗಳನ್ನು ತಂದು ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಪಡಿಸುವ ಗುರಿ ಇಟ್ಟುಕೊಂಡಿರುವುದಾಗಿ ತಿಳಿಸಿದರು.
ಶಾಸಕರು ಆಲಘಟ್ಟ, ಬೊಮ್ಮೇನಹಳ್ಳಿ, ಹಿರೇಗುಂಟನೂರು ಗ್ರಾಮಗಳಲ್ಲಿ ಸಿಸಿ ರಸ್ತೆಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಆಲಗಟ್ಟ ಗ್ರಾಪಂ ಅಧ್ಯಕ್ಷ ಕೆ.ಎಂ. ನಾಗರಾಜಪ್ಪ, ಆಲಘಟ್ಟ ಪಿಡಿಒ ಸಿ.ಎಲ್. ಬಸವರಾಜಪ್ಪ, ಚಿತ್ರದುರ್ಗ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ನಾಗರಾಜ್, ಕಾಂಗ್ರೆಸ್ ಮುಖಂಡರಾದ ವಿಜಯಕುಮಾರ್, ಬಸವರಾಜ್, ಶೇಕ್ ಫಾರಕ್, ಮಂಜುನಾಥ್, ಸಿದ್ದಾಪುರ ತಿಮ್ಮಣ್ಣ, ನಾಗಣ್ಣ, ರಂಗಣ್ಣ, ದರ್ಶನ, ಶಶಿ, ಸುನೀಲ್, ಸಂತೋಷ್, ವಿಷ್ಣು, ರಾಹುಲ್, ಧನಂಜಯ್, ಜಯಣ್ಣ, ನಾಗರಾಜ್, ಹನುಮಂತಪ್ಪ ಇತರರು ಇದ್ದರು.