ಕಲಿಕಾ ವಿಷಯದಲ್ಲಿ ಮಕ್ಕಳ ಮೇಲೆ ಬೇಡ ಅನಗತ್ಯ ಒತ್ತಡ :ಎಸ್‌ಐ ಜಂಬೂರಾಜ್ ಸಲಹೆ

29
Published on

ಪುತ್ತೂರು ಗ್ರಾಮಾಂತರ: ಕಲಿಕಾ ವಿಷಯದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರಬಾರದು. ಅಂಕ ಕಡಿಮೆ ಬಂದರೆ ಅಥವಾ ಫಲಿತಾಂಶ ವ್ಯತಿರಿಕ್ತವಾಗಿ ಬಂದರೆ ಒತ್ತಡಕ್ಕೆ ಒಳಗಾಗಬಾರದು ಎಂದು ಸಂಪ್ಯ ಠಾಣೆಯ ಎಸ್‌ಐ ಜಂಬೂರಾಜ್ ಮಹಾಜನ್ ಹೇಳಿದರು.

ಸರ್ವೆ ಗ್ರಾಮದ ಭಕ್ತಕೋಡಿ ಎಸ್‌ಜಿಎಂ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಪುತ್ತೂರು ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ ಮೂರು ತಿಂಗಳ ಟ್ಯೂಷನ್ ತರಗತಿ ಸಮಾರೋಪ ಉದ್ಘಾಟಿಸಿ ಮಾತನಾಡಿದರು.

ಪುತ್ತೂರು ತಾಲೂಕು ಯೋಜನಾಧಿಕಾರಿ ಶಶಿಧರ ಎಂ. ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಪರ ಕಾಳಜಿಯ ವಿವಿಧ ಕಾರ್ಯಕ್ರಮ ನಿರಂತರ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕೆಮ್ಮಿಂಜೆ ವಲಯಾಧ್ಯಕ್ಷ ಸುಂದರ ಬಲ್ಯಾಯ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಯೂಸುಫ್ ರೆಂಜಲಾಡಿ, ಮುಖ್ಯಶಿಕ್ಷಕ ಸೋಮಶೇಖರ್, ಸರ್ವೆ ಒಕ್ಕೂಟದ ಅಧ್ಯಕ್ಷ ಶಶಿಧರ ಎಸ್.ಡಿ, ಆಡಳಿತ ಮಂಡಳಿ ಸಂಚಾಲಕಿ ಡಾ.ಯಾದವಿ ಜಯಕುಮಾರ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜಯಂತ ಬೇಕಲ್, ಯೋಜನೆಯ ಸೇವಾ ಪ್ರತಿನಿಧಿ ಚಿತ್ರಾ ಉಪಸ್ಥಿತರಿದ್ದರು. ಶಿಕ್ಷಕ ಮೋಹನ್ ಸ್ವಾಗತಿಸಿದರು. ಶಿಕ್ಷಕಿ ಸುಜಾತ ವಂದಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net