ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ

12SND-04
Published on

ಸಿಂಧನೂರು: ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುವುದು ಇಂದಿನ ಅಗತ್ಯವಾಗಿದ್ದು, ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕೆಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ತಾಲೂಕಿನ ಕಲಮಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐದು ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಶುಕ್ರವಾರ ಮಾತನಾಡಿದರು. ರಾಜ್ಯ ಸರ್ಕಾರ ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಗ್ರಾಮದಲ್ಲಿ ಬಹುದಿನಗಳ ಬೇಡಿಕೆಯಾದ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಕಾಮಗಾರಿ ತ್ವರಿತವಾಗಿ ಆರಂಭಿಸಿ ಗುಣಮಟ್ಟದಲ್ಲಿ ನಿರ್ಮಾಣ ಮಾಡಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಣ ಸಿಗುತ್ತಿದೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಏರಿಕೆಯಾಗುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದರು.

ಗ್ರಾಪಂ ಮಾಜಿ ಉಪಾಧ್ಯಕ್ಷ ರಾಮಣ್ಣ ಬಡಿಗೇರ, ಮಾಜಿ ಸದಸ್ಯ ಬಾಷಾಸಾಬ್, ಪ್ರಮುಖರಾದ ಪಂಪನಗೌಡ ಜಾಲಿಹಾಳ, ಬಸವರಾಜ ಹಳೆಮನಿ, ಬಸವರಾಜಪ್ಪ, ಶರಣಬಸವ ಹೊಸಮನಿ, ಶಾಮಣ್ಣ, ಹುಸೇನಪ್ಪ, ಗಂಗಪ್ಪ, ಸಿದ್ದಣ್ಣ ಬಡಿಗೇರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net