ಗ್ರಾಮೀಣ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧ

26 SIRWAR 01
ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜು ಭೂಮಿ ಪೂಜೆ ನೆರವೇರಿಸಿದರು. ಶಾಸಕ ಹಂಪಯ್ಯ ನಾಯಕ, ಪ್ರಮುಖರಾದ ಶರಣಯ್ಯ ನಾಯಕ, ಬ್ರಿಜ್ಜೇಶ ಪಾಟೀಲ್, ಗಂಗಣ್ಣ ಸಾಹುಕಾರ, ಕೆ ಶಾಂತಪ್ಪ, ಬಲ್ಲಟಗಿ ಅಮರೇಶಪ್ಪ, ಕಿರಲಿಂಗಪ್ಪ, ಶಿವಮೂರ್ತಿ, ಮಲ್ಲಟ ಮಲ್ಲಿಕಾರ್ಜುನ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ, ದೇವೆಂದ್ರಪ್ಪ ಬೊಮ್ಮನಾಳ, ದಾನಗೌಡ ಬಸವರಾಜ ಪಾಟೀಲ್, ನಾಗಪ್ಪ ನವಲಕಲ್, ರಮೇಶ ದರ್ಶನಕರ್, ಬೀರಪ್ಪ, ಶಿವಣ್ಣ, ಪ್ರವೀಣ, ನಾಗರಾಜ ಇದ್ದರು.
Published on

ಸಿರವಾರ: ಗ್ರಾಮೀಣ ಭಾಗದ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಸವಾರ್ಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು.

ತಾಲೂಕಿನ ಮಲ್ಲಟ, ಬಲ್ಲಟಗಿ, ಕೆ.ಗುಡದಿನ್ನಿ ಸೇರಿ ವಿವಿಧೆಡೆ 5.16 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ನಾಡಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹೆಚ್ಚಿನ ಅನುದಾನವನ್ನು ನೀಡುತ್ತಿದೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅನೇಕ ಜನಪರ ಯೋಜನೆಗಳನ್ನು ರೂಪಿಸುತ್ತಿದೆ. ಜನರ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದರು.

ತಾಲೂಕಿನ ಮಲ್ಲಟ ಗ್ರಾಮದಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ಕೆಕೆಆರ್‌ಡಿಬಿಯ ಮೈಕ್ರೋ ಯೋಜನೆ ಅಡಿಯಲ್ಲಿ ಸಿಸಿ ರಸ್ತೆ ಕಾಮಗಾರಿ ಹಾಗೂ ಸರ್ಕಾರಿ ಪ್ರೌಢಶಾಲೆಗೆ 17.50 ಲಕ್ಷ ರೂ.ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಲ್ಲಟಗಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿ 20. 87 ಲಕ್ಷ ರೂ. ವೆಚ್ಚದಲ್ಲಿ ಬಸ್ ಶೆಲ್ಟರ್ ನಿರ್ಮಾಣ, 25 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ, 30.27 ಲಕ್ಷ ರೂ.ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಂಪೌಂಡ್ ನಿರ್ಮಾಣ, 1 ಕೋಟಿ 13 ಲಕ್ಷ ರೂ. ವೆಚ್ಚದಲ್ಲಿ ಬಲ್ಲಟಗಿ ಗ್ರಾಮದ ಮುಖ್ಯ ರಸ್ತೆಗೆ ಕ್ರಾಸ್ ಬ್ಯಾರಿಯರ್ ಅಳವಡಿಕೆ, 1.24 ಕೋಟಿ ರೂ.ವೆಚ್ಚದಲ್ಲಿ ಪಲ್ಲಟಿಗೆ ಲಮಾಣಿ ಕ್ಯಾಂಪ್‌ನಿಂದ ಬಲ್ಲಟಗಿ ಕ್ಯಾಂಪ್ ವರೆಗೆ ರಸ್ತೆ ಡಾಂಬರಿಕರಣ ಸೇರಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net