ಗ್ರಾಮೀಣ ಕ್ರೀಡೆಗೆ ಬೇಕಿದೆ ಉತ್ತೇಜನ

sports
Published on

ಶಿರಹಟ್ಟಿ: ಪಟ್ಟಣದ ಎಸ್.ಎಂ.ಡಬಾಲಿ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ಶಿರಹಟ್ಟಿ-ಲಕ್ಷ್ಮೇಶ್ವರ ತಾಲೂಕುಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಶಾಸಕ ಡಾ.ಚಂದ್ರು ಲಮಾಣಿ ಮಾತನಾಡಿ, ‘ದೈಹಿಕ, ಮಾನಸಿಕ ವಿಕಸನಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ. ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುವುದರ ಮೂಲಕ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ, ತರಬೇತಿ ನೀಡಬೇಕು ಎಂದರು.

ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಎಂ. ಹವಳದ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಇಒ ಜಿ.ಎಂ. ಮುಂದಿನಮನಿ, ಅಕ್ಷರ ದಾಸೋಹ ಅಧಿಕಾರಿ ಎಚ್.ಎಸ್. ರಾಮನಗೌಡ್ರ, ಪಿಎಸ್‌ಐ ಈರಪ್ಪ ರಿತ್ತಿ, ಶರಣಬಸವಗೌಡ ಪಾಟೀಲ, ಎಸ್.ಎಫ್.ಮಠದ, ಬಿ.ಎಸ್. ಹರ್ಲಾಪೂರ, ಎಂ.ಕೆ. ಲಮಾಣಿ, ಎಚ್.ಆರ್. ಬೆನಹಾಳ, ಎಂ.ಎ.ಬುಕೀಟಗಾರ, ಪಪಂ ಸದಸ್ಯ ಸಂದೀಪ ಕಪ್ಪತ್ತನವರ, ಹೊನ್ನಪ್ಪ ಶಿರಹಟ್ಟಿ, ಫಕೀರೇಶ ರಟ್ಟಿಹಳ್ಳಿ, ನಾಗರಾಜ ಲಕ್ಕುಂಡಿ, ರಾಮು ಕಂಬಳಿ ಇತರರಿದ್ದರು. ಎಂ.ಡಿ. ತಳ್ಳಳ್ಳಿ ನಿರ್ವಹಿಸಿದರು, ಆರ್.ಎಚ್. ನೆಲೋಗಲ್ ಪ್ರತಿಜ್ಞಾವಿಧಿ ಬೋಧಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net