ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

Crime Logo
Published on

ಶಿಗ್ಗಾಂವಿ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಇಬ್ಬರು ಆರೋಪಿಗಳನ್ನು ತಾಲೂಕಿನ ಹುಲಗೂರ ಠಾಣೆ ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ.
ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದ ದುರುಗಪ್ಪ ಜುಟ್ಟಲ (31) ಹಾಗೂ ಮೈಲಾರಪ್ಪ ಅಂಬಿಗೇರ (32) ಬಂಧಿತ ಆರೋಪಿಗಳು. ಇವರಿಂದ ಲಾರಿ ಹಾಗೂ ಮರಳನ್ನು ವಶಪಡಿಸಿಕೊಳ್ಳಲಾಗಿದೆ.
ಇವರು ಚವಡಾಳ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಲಾರಿ ಹಾಗೂ ಮರಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net