ಬೊಮ್ಮಾಯಿ ಸರ್ಕಾರದಿಂದ ಮಹತ್ವದ ಆದೇಶ: 11 ಐಎಎಸ್‌ ಅಧಿಕಾರಿಗಳ ವರ್ಗಾವಣೆ

vidhana soudha
Published on

ಬೆಂಗಳೂರು: ಹನ್ನೊಂದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ವರ್ಗಾವಣೆಯಾದ ಬೆನ್ನಲ್ಲೇ ಇದೀಗ ಈ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ.

ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ. ರಜನೀಶ್ ಗೋಯಲ್ ಅವರಿಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹೊಣೆಗಾರಿಕೆ ನೀಡಲಾಗಿದೆ. ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ಅವರನ್ನು ಸಹ ಬೆಂಗಳೂರಿನ ಅಭಿವೃದ್ಧಿ ಆಯುಕ್ತ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.

ಉಳಿದ ಅಧಿಕಾರಿಗಳ ವರ್ಗಾವಣೆ ಪಟ್ಟಿ ಇಂತಿದೆ:

ಉಮಾಶಂಕರ್- ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ

ರಶ್ಮಿ ವಿ.ಮಹೇಶ್- ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ

ಪಂಕಜ್ ಕುಮಾರ್ ಪಾಂಡೆ- ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ

ರಾಮ್ ಪ್ರಸಾದ್​ ಮನೋಹರ್- ಬಿಬಿಎಂಪಿ ವಿಶೇಷ ಆಯುಕ್ತ

ವಿನೋಥ್ ಪ್ರಿಯಾ- ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಎಂಡಿ

ರಮೇಶ್ ಡಿ.ಎಸ್ - ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ನಿರ್ದೇಶಕ

ಶರತ್.ಬಿ- ಕೃಷಿ ಇಲಾಖೆಯ ಆಯುಕ್ತ

ಸತ್ಯಭಾಮ- ಅತಿಸಣ್ಣ, ಸಣ್ಣ, ಮಧ್ಯಮ ಉದ್ಯಮ, ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ನಿರ್ದೇಶಕ

ಸೋಮಶೇಖರ್ ಎಸ್.ಜೆ- ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಎಂಡಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net