24 ಗಂಟೆಗಳಲ್ಲಿ ರಾಜ್ಯದಲ್ಲಿ 191 ಕರೊನಾ ಕೇಸ್‌: ಬೆಂಗಳೂರು ಒಂದರಲ್ಲೇ 171 ಪ್ರಕರಣ ದಾಖಲು

corona
Published on

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 191 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,854ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಕೋವಿಡ್‌ನಿಂದ ಯಾರೂ ಮೃತಪಟ್ಟಿಲ್ಲ. 138 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, 11,380 ಕೋವಿಡ್ ಟೆಸ್ಟ್ ನಡೆಸಲಾಗಿದೆ.

ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 1.61ರಷ್ಟಿದ್ದು, ಬೆಂಗಳೂರು ನಗರದಲ್ಲಿ 171 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,763 ಇದೆ. ಮೈಸೂರಲ್ಲಿ 14, ದಕ್ಷಿಣ ಕನ್ನಡದಲ್ಲಿ 2 ಪ್ರಕರಣಗಳು ಕಂಡುಬಂದಿವೆ. ಚಿತ್ರದುರ್ಗ, ತುಮಕೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ತಲಾ 1 ಪ್ರಕರಣಗಳು ಪತ್ತೆಯಾಗಿವೆ.

ಇದುವರೆಗೆ ರಾಜ್ಯದಲ್ಲಿ 39.48 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 40,060 ಮಂದಿ ಮೃತರಾಗಿದ್ದಾರೆ. ಮೇ 5ರಂದು 138 ಜನರು ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 39.06 ಲಕ್ಷಕ್ಕೆ ಏರಿಕೆಯಾಗಿದೆ.

Koo App
Covid numbers in Karnataka: ◾New cases in State: 191 ◾New cases in B’lore: 171 ◾Positivity rate: 1.61% ◾Discharges: 138 (B’lore- 128) ◾Deaths:0 ◾Active cases in State: 1,854 ◾Active cases in B’lore: 1,763 ◾Tests: 11,380 #COVID19-Dr. Sudhakar K (@drsudhakark.official)5 May 2022
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net