ಅತಿವೃಷ್ಟಿಪೀಡಿತ ಪಟ್ಟಿಗೆ ಇನ್ನೂ 22 ಹೊಸ ತಾಲೂಕು ಸೇರ್ಪಡೆ- ಆರ್​.ಅಶೋಕ್

r ashok
Published on

ಬೆಂಗಳೂರು: 61 ತಾಲೂಕುಗಳು ಪ್ರವಾಹ ಪೀಡಿತವೆಂದು ಘೋಷಣೆ ಮಾಡಲಾಗಿದ್ದು, ಈಗ ಮತ್ತೆ ಹೊಸದಾಗಿ 22 ತಾಲೂಕು ಪ್ರವಾಹ ಪೀಡಿತವೆಂದು ಘೋಷಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಬೆಳಗಾವಿ, ಚಿಕ್ಕಮಗಳೂರು, ಕಡೂರು, ತರಿಕೆರೆ, ಸೂಪ, ಬಬಲೇಶ್ವರ, ಕೊಲ್ಹಾರ, ಮುದ್ದೆಬಿಹಾಳ, ಮೂಡಿಗೆರೆ ಹೊಸನಗರಗಳ ಜತೆಗೆ ಇನ್ನೂ ಕೆಲವು ತಾಲೂಕುಗಳನ್ನು ಪ್ರವಾಹ ಪೀಡಿತವೆಂದು ಘೋಷಿಸಿದ್ದೇವೆ ಎಂದರು.
ಬೆಂಗಳೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಅತಿವೃಷ್ಟಿ ತಾಲೂಕಿನಲ್ಲಿ ಪರಿಹಾರೋಪಾಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲೂ 50 ಕ್ಕೂ ಹೆಚ್ಚು ರಸ್ತೆಗಳಲ್ಲಿ ನೀರು ನಿಲ್ಲುತ್ತಿದ್ದು ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಚಂಡಮಾರುತದ ಅಬ್ಬರದ ಬಗ್ಗೆಯೂ ಅಲರ್ಟ್ ಕೊಡಲಾಗಿದೆ. ಕರಾವಳಿ ಭಾಗದ 40 ಕಡೆ ಅನುಷ್ಠಾನ ಮಾಡಲಾಗುತ್ತಿದೆ. ಅಲಾರಾಂ ಸಿಸ್ಟಂಗಳನ್ನು ಮಾಡುತ್ತಿದ್ದೇವೆ. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ಹಣ ಬರಲಿದೆ. ಒಂದೊಂದು ಸಿಸ್ಟಂಗೆ 12 ಕೋಟಿ ಖರ್ಚಾಗುತ್ತದೆ ಎಂದು ಸಚಿವರು ಹೇಳಿದರು. ಈ ಅಲಾರಂ ಆರೇಳು ಕಿಮೀವರೆಗೆ ಇದು ಸೈರನ್ ಮಾಡಲಿದೆ. ಚಂಡಮಾರುತಗಳ ಸುಳಿವನ್ನ ನೀಡಲಿದೆ. ಇದು ಕರಾವಳಿ ಭಾಗದ ಜನರಿಗೆ ಅನುಕೂಲವಾಗಲಿದೆ. ಮೀನುಗಾರರಿಗೆ ಇದು ಹೆಚ್ಚು ಉಪಯೋಗವಾಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net