

ಬೆಂಗಳೂರು: ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ 1,600 ಕೋಟಿ ರೂಪಾಯಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಾರಿಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಇನ್ನು ಎರಡು ವರ್ಷಗಳಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು, ನಲ್ಲಿಗಳ ಮೂಲಕ ನೀರು ಸಂಪರ್ಕ ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮಳೆಗಾಲದಲ್ಲಿ ಹಾನಿಯಾದ ರಸ್ತೆ ಅಭಿವೃದ್ಧಿಗೆ 300 ಕೋಟಿ ರೂಪಾಯಿ, ಅಮೃತ್ ಗ್ರಾಮ ಪಂಚಾಯಿತಿ ಯೋಜನೆಗೆ 188 ಕೋಟಿ ರೂಪಾಯಿ, 750 ಗ್ರಾ.ಪಂ.ಗಳಿಗೆ ತಲಾ 25 ಲಕ್ಷ ರೂಪಾಯಿ, ಪ್ರಸಕ್ತ ವರ್ಷದಲ್ಲಿ ರಾಜ್ಯದ 1000 ಕೆರೆಗಳ ಅಭಿವೃದ್ಧಿ, ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ, ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.