ಸಂಸದ ಪ್ರತಾಪ್ ಸಿಂಹ ಪೋಸ್ಟ್‌ಗೆ ಎಸ್.ಎ.ರಾಮದಾಸ್ ಟಾಂಗ್

Ramadas Pratapsimha
Published on


ಸಂಸದ ಪ್ರತಾಪ್ ಸಿಂಹ ಅವರ ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಮಾಜಿ ಸಚಿವ ಎಸ್.ಎ.ರಾಮದಾಸ್ ಟಾಂಗ್ ನೀಡಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ರಘುಪತಿ ಭಟ್ ಹಾಗೂ ನನ್ನನ್ನೂ ಸೇರಿದಂತೆ ಪ್ರಮುಖ 6 ಶಾಸಕರಿಗೆ ಟಿಕೆಟ್ ಮಿಸ್ ಆಗಿತ್ತು. ಪರಿಣಾಮ ಕೆಲವರು ಪಕ್ಷ ತೊರೆದರು. ಆದರೆ ನಾನು ಟಿಕೆಟ್ ಕೈ ತಪ್ಪಿತೆಂದು ಸಮ್ಮನೆ ಕೈಕಟ್ಟಿ ಕೂರಲಿಲ್ಲ, ಪಕ್ಷದ ಬಲವರ್ಧನೆಗೆ ಮುಂದಾದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳ ಕ್ಲಸ್ಟರ್ ಹೆಡ್ ಆಗಿ ಗೆಲುವಿಗಾಗಿ ಶ್ರಮಿಸಿದ್ದೇನೆ ಎಂದರು.

ನಾನು ಶಾಸಕನಾಗುವ ಮೊದಲು ಕೇವಲ ಸಾಮಾನ್ಯ ಕಾರ್ಯಕರ್ತನಾಗಿದ್ದೆ. ಪಕ್ಷ ಗುರುತಿಸಿ ಟಿಕೆಟ್ ಕೊಟ್ಟಿದ್ದರಿಂದ ಮೂರು ಬಾರಿ ಶಾಸಕನಾದೆ, ಸಚಿವನೂ ಆದೆ. ಪಕ್ಷ ತಾಯಿ ಇದ್ದಂತೆ, ಪಕ್ಷದಿಂದ ನಾನು ಇಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯವಾಯಿತು. ಯಾರೇ ಆಗಲಿ ಟಿಕೆಟ್ ಸಿಗಲಿಲ್ಲವೆಂದು ಪಕ್ಷಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳಬಾರದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net