ದಾವಣಗೆರೆಯಲ್ಲಿ ಭೀಕರ ಅಪಘಾತ: ಲಾರಿಯ ಚಕ್ರಕ್ಕೆ ಸಿಲುಕಿ ಶಿವಮೊಗ್ಗದ ದಂಪತಿ, ಮಗು ದುರ್ಮರಣ

accident
ಸಾಂದರ್ಭಿಕ ಚಿತ್ರ
Published on

ದಾವಣಗೆರೆ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕುಂದುವಾಡ ಕ್ರಾಸ್ ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಶಿವಮೊಗ್ಗ ಮೂಲದ ಜಬೀವುಲ್ಲಾ (45), ಅವರ ಪತ್ನಿ ಹಮೀದಾ (43), ಮೊಮ್ಮಗಳು ಗೌಸಿಯಾ ಬಾನು (4) ಮೃತರು.

ಮೂವರೂ ಒಂದೇ ಬೈಕಿನಲ್ಲಿ ಶಿವಮೊಗ್ಗ ಕಡೆಯಿಂದ ದಾವಣಗೆರೆ ಕಡೆಗೆ ಬರುವಾಗ ಬೈಕ್ ಆಯ ತಪ್ಪಿ ಬಿದ್ದು ಲಾರಿಯ ಚಕ್ರಕ್ಕೆ ಸಿಲುಕಿದ್ದಾರೆ. ಹಮೀದಾ, ಗೌಸಿಯಾ ಸ್ಥಳದಲ್ಲೇ ಮೃತಪಟ್ಟರೆ ಜಬೀವುಲ್ಲಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಜಬೀವುಲ್ಲಾ ಮತ್ತು ಹಮೀದಾ ಅವರು, ದಾವಣಗೆರೆ ನಿಟ್ಟುವಳ್ಳಿಯಲ್ಲಿರುವ ಮಗಳ ಮನೆಗೆ ಮೊಮ್ಮಗಳನ್ನು ಕರೆದುಕೊಂಡು ಹೊರಟಿದ್ದರು ಎಂದು ತಿಳಿದು ಬಂದಿದೆ.

ದಾವಣಗೆರೆ ದಕ್ಷಿಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net