ಆಗುಂಬೆ ಘಾಟ್‌ನಲ್ಲಿ ಪ್ರಪಾತಕ್ಕೆ ಬಿದ್ದ ಲಾರಿ: ನಾಲ್ಕು ಮಂದಿ ಸಾವು- ಐವರ ಸ್ಥಿತಿ ಚಿಂತಾಜನಕ

agumbe
Published on

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದುದರಿಂದ ಲಾರಿಯಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಗುಂಬೆ ಘಾಟಿಯಲ್ಲಿ ತಿರುವು ಪಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಚಿಕ್ಕಮಗಳೂರಿನಿಂದ ಈ ಲಾರಿ ಕಾರವಾರಕ್ಕೆ ತೆರಳುತ್ತಿತ್ತು.

ಹೆಬ್ರಿ ಲಿಮಿಟೆಡ್‌ಗೆ ಸೇರಿರುವ ಲಾರಿ ಇದಾಗಿದೆ. ಘಟನೆಯಿಂದಾಗಿ ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹ ಮತ್ತು ಗಾಯಾಳುಗಳನ್ನು ಮೇಲಕ್ಕೆತ್ತಲು ಹರಸಾಹಸ ಪಡಬೇಕಾಯಿತು. ಹೆಬ್ರಿ ಮತ್ತು ಆಗುಂಬೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೃತ ನಾಲ್ವರು ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮಿಯಾರು ಜೋಡುಕಟ್ಟೆ ನಿವಾಸಿಗಳು ಎಂದು ಗುರುತಿಸಲಾಗಿದೆ. ಚಾಲಕ ವಿಘ್ನೇಶ್, ಶ್ರೀಜಿತ್, ಮಂಜುನಾಥ, ಮಣಿ ಮೃತಪಟ್ಟವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net