ಹಾಸನದ ಬಳಿ ಭೀಕರ ಅಪಘಾತ: ತಂದೆ- ಮಗ ಸಾವು- ಮೂವರ ಸ್ಥಿತಿ ಚಿಂತಾಜನಕ

accident
Published on

ಹಾಸನ: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಆಲೂರು-ಈಶ್ವರಹಳ್ಳಿ ರಸ್ತೆಯ ಬಳಿ ನಡೆದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗ ಮೃತಪಟ್ಟಿರುವ ಘಟನೆ ನಡೆದಿದೆ.

ಕ್ಯಾಂಟರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ತಮಿಳುನಾಡು ಮೂಲದ ಅಂಜನಪ್ಪ (40), ಪುತ್ರ ಕಾರ್ತಿಕ್ (17) ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ. ಆಲೂರು-ಈಶ್ವರಹಳ್ಳಿ ರಸ್ತೆಯ ಕೂಡಿಗೆ ಸಮೀಪ ಈ ಘಟನೆ ಸಂಭವಿಸಿದೆ.

ಮೃತರು ಧರ್ಮಸ್ಥಳಕ್ಕೆ ಹೊರಟಿದ್ದರು. ಎರಡು ಕಾರಿನಲ್ಲಿ 10 ಮಂದಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಒಂದು ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿದೆ. ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೆದ್ದಾರಿಯ ಹಲವೆಡೆ ಹಲವು ವರ್ಷಗಳಿಂದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕೆಲ ವರ್ಷವಾದರೂ ಕಾಮಗಾರಿ ಮುಗಿಯದೇ ಇರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net