12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನೇಮಕಾತಿ ರದ್ದು ಮಾಡಿದ ಸರ್ಕಾರ

notification
Published on

ಬೆಂಗಳೂರು: ಇತ್ತೀಚೆಗಷ್ಟೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರ ನಾಮನಿರ್ದೇಶನ ರದ್ದು ಮಾಡಿ ಸರ್ಕಾರ ಆದೇಶಿಸಿತ್ತು. ಅದರ ಬೆನ್ನಲ್ಲೇ ಇದೀಗ ರಾಜ್ಯದ 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿ ಸರ್ಕಾರ ಆದೇಶಿಸಿದೆ.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್‌ ಮಿಜಾರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್‌ ವಿ ರಾಜೀವ್‌, ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಲಾಟಮೂರ್ತಿ, ಚಾಮರಾಜನಗರ ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಬಿ ಶಾಂತಮೂರ್ತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ ಎಸ್‌ ರಮೇಶ್‌ ಹೊಳ್ಳ ಅವರ ನಾಮ ನಿರ್ದೇಶನ ರದ್ದುಗೊಳಿಸಲಾಗಿದೆ.

ಅಂತೆಯೇ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಕೆಜಿಎಫ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಅಶ್ವಿನಿ, ಹುಬ್ಬಳ್ಳಿ -ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್‌ ಪುಂಡಲೀಕ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ ಜೀರೆ, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ ಆನಂದ, ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವಲಿಂಗಪ್ಪ ಕಾಶಿನಾಥ್‌ ನಾವಲಗಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್‌ ಪ್ರಹ್ಲಾದ ರಾವ್‌ ಧಾರವಾಡಕರ್‌ ಅವರ ನಾಮ ನಿರ್ದೇಶನವನ್ನು ರದ್ದುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಅವರು ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net