ಅಧಿಕಾರ ಹಸ್ತಾಂತರಕ್ಕೂ ಮುನ್ನವೇ ಕರೊನಾಕ್ಕೆ ಬಲಿಯಾದ ಆಯುಷ್‌ ಇಲಾಖೆ ವೈದ್ಯ

corona-ayush
Published on

ಚಾಮರಾಜನಗರ: ಕರೊನಾ ಮಹಾಮಾರಿ ಕ್ಷಣ ಕ್ಷಣಕ್ಕೂ ತನ್ನ ರೌದ್ರಾವತಾರ ತೋರುತ್ತಲೇ ಇದೆ. ಯಾರಿಗೆ, ಯಾವ ರೀತಿಯಲ್ಲಿ ಈ ಸೋಂಕು ಒಕ್ಕರಿಸುತ್ತಿದೆಯೋ ತಿಳಿಯುತ್ತಿಲ್ಲ.

ಇದೀಗ ಚಾಮರಾಜನಗರದ ಜಿಲ್ಲಾ ಅಯುಷ್ ವೈದ್ಯಾಧಿಕಾರಿ ಡಾ.ರಾಚಯ್ಯ ಅವರು ಕರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಇವರನ್ನು ಜುಲೈ 26ರಂದು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿನ ಕೋವಿಡ್ ಆಸ್ಪತ್ರೆಗೆ ದಾಖಲುಮಾಡಲಾಗಿತ್ತು. ಆದರೆ ಡಾ.ರಾಚಯ್ಯ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೈಸೂರಿನ ಉದಯಗಿರಿ ನಿವಾಸಿಯಾಗಿದ್ದ ಇವರು ಕಳೆದ 22 ವರ್ಷಗಳಿಂದ ಚಾಮರಾಜನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜುಲೈ31 ರಂದು ಇವರಿಗೆ ನಿವೃತ್ತಿಯಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಇದುವರೆಗೆ ಅಧಿಕಾರವನ್ನು ಹಸ್ತಾಂತರ ಮಾಡಿರಲಿಲ್ಲ. ಅಷ್ಟರೊಳಗೆ ಕರೊನಾ ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದಾರೆ.

ಡಾ.ರಾಚಯ್ಯ ಅವರಿಗೆ ಮಧುಮೇಹ ಹಾಗು ರಕ್ತದೊತ್ತಡ ಇತ್ತು ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಆಯುಷ್ ಇಲಾಖೆಯ ಇಬ್ಬರು ಸಿಬ್ಬಂದಿಗೆ ಸೋಂಕಿನ ಪರೀಕ್ಷೆ ಮಾಡಲಾಗಿದ್ದು ಇಬ್ಬರಿಗೂ ನೆಗೆಟಿವ್ ಬಂದಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net