ಆಜಾನ್​ ಕೂಗೋದು ಒಂದು ಗಂಟೆ ಪೋಸ್ಟ್​ಪೋನ್​​: ಮುಸ್ಲಿಂ ಮುಖಂಡರ ಒಮ್ಮತದ ತೀರ್ಮಾನ

azan
Published on

ಬೆಂಗಳೂರು: ರಾಜ್ಯದ ಎಲ್ಲಾ ಪ್ರಾರ್ಥನಾ ಮಂದಿರಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲಾಗಿ 6 ಗಂಟೆಗೆ ಅಜಾನ್ ಕೂಗಲು ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನೀಡಿರುವ ಆದೇಶ ಮತ್ತು ಮಾರ್ಗಸೂಚಿಗಳನ್ನು ಪಾಲಿಸಲು ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ.

ಅಮೀರ್‌ ಎ ಷರಿಯತ್‌ ಆಗಿರುವ ಮೌಲಾನ ಸಗೀರ್‌ ಅಹಮದ್‌ ಅಧ್ಯಕ್ಷತೆಯಲ್ಲಿ ಷರಿಯತ್‌-ಎ-ಹಿಂದ್‌ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮೂಡಿದೆ ಎಂದು ಹೇಳಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮುಖಂಡ . ಉಮರ್ ಶರೀಫ್ ಅವರು, ಸಭೆಯಲ್ಲಿ ಎಲ್ಲರೂ ಸಹಮತ ಸೂಚಿಸಿದ್ದಾರೆ. ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದಿದ್ದಾರೆ.

ಬೆಳಗ್ಗೆ 6 ಗಂಟೆ ಬಳಿಕ ಮೈಕ್‌ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು. ಆಜಾನ್​ಗೆ ಸರ್ಕಾರ ಅಥವಾ ಸುಪ್ರೀಂ ಕೋರ್ಟ್‌ನ ವಿರೋಧವಿಲ್ಲ. ಈ ಹಿನ್ನೆಲೆಯಲ್ಲಿ ಒಂದು ಗಂಟೆ ಪೋಸ್ಟ್​ಪೋನ್​ ಮಾಡಲಾಗಿದೆ ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್‌ ಷಫಿ ಸಾ ಅದಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net