ಬಾಗಲಕೋಟೆ ಬಿಜೆಪಿಯಲ್ಲಿ ಕೋಲಾಹಲ: ಶಾಸಕನ ತಮ್ಮ ಪಕ್ಷದಿಂದ ಔಟ್​- 'ಸಹೋದರರ ಸವಾಲ್​' ಎಂದು ಕಾಂಗ್ರೆಸ್​ ವ್ಯಂಗ್ಯ

BJP
Published on

ಬಾಗಲಕೋಟೆ: ಬಿಜೆಪಿ ಶಾಸಕನ ಸಹೋದರನ ಮೇಲೆ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಇವರೂ ಸೇರಿದಂತೆ ಒಟ್ಟು ನಾಲ್ವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಅರುಣ ಲೋಕಾಪುರ, ಗುರು ಅನಗವಾಡಿ, ಪ್ರಶಾಂತ ಸೊನಕನಾಳ ಉಚ್ಛಾಟನೆಗೊಂಡ ಇತರೆ ಬಿಜೆಪಿ ಕಾರ್ಯಕರ್ತರು. ಇವರೆಲ್ಲರನ್ನೂ ಪಕ್ಷದಿಂದ ಉಚ್ಛಾಟಿಸಿ ಬಾಗಲಕೋಟೆ ಜಿಲ್ಲಾ ಅಧ್ಯಕ್ಷ ಎಸ್.ಟಿ.ಪಾಟೀಲ ಆದೇಶ ಹೊರಡಿಸಿದ್ದಾರೆ.

ಮಲ್ಲಿಕಾರ್ಜುನ ಚರಂತಿಮಠ ಮುಂದಿನ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದರು. ಇತ್ತೀಚಿಗೆ ಪಕ್ಷದಲ್ಲಿ ಅವರದ್ದೇ ಗುಂಪು ಸಕ್ರಿಯವಾಗಿತ್ತು. ಇದು ಶಾಸಕ ವೀರಣ್ಣ ಚರಂತಿಮಠ ಅವರಿಗೆ ಸಾಕಷ್ಟು ಇರುಸು ಮುರಸು ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಮಲ್ಲಿಕಾರ್ಜುನ ಚರಂತಿಮಠ ಉಚ್ಛಾಟನೆಗೆ ಕಾಂಗ್ರೆಸ್ ಕಾರ್ಯಕರ್ತರು ಸಹೋದರರ ಸವಾಲ್ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡುತ್ತಿದ್ದಾರೆ (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net