

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಕೆ ಮಾಡಲಾಗಿದೆ. ಈ ಮೂಲಕ ದೇಶದಲ್ಲೇ ಅತ್ಯಂತ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೂ ಬಿಬಿಎಂಪಿಗೆ ದಕ್ಕಿದೆ.
ಕಳೆದ ಸಚಿವ ಸಂಪುಟ ಸಭೆಯಲ್ಲಿ ಬಿಬಿಎಂಪಿ ವಾರ್ಡ್ ಹೆಚ್ಚಳ ಕುರಿತಂತೆ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆಗೆ ಕಳೆದ ಸೂಚಿಸಿತ್ತು. ನಂತರ ಇದನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಈಗ ರಾಜ್ಯಪಾಲರು ಇದಕ್ಕೆ ಅನುಮೋದನೆ ನೀಡಿದ್ದಾರೆ.
ಈ ಮೂಲಕ ವಾರ್ಡ್ಗಳ ಸಂಖ್ಯೆ 198ರಿಂದ 243ಕ್ಕೆ ಏರಿಕೆಯಾಗಲಿದೆ. ಇದೀಗ ಚುನಾವಣೆ ಕೂಡ 243 ವಾರ್ಡ್ಗಳಿಗೆ ನಡೆಯಬೇಕಿದೆ.
ಈ ಮೊದಲು ಇದ್ದ 198 198 ವಾರ್ಡ್ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು. ಆದರೆ ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಅದಿನ್ನೂ ವಿಚಾರಣೆಗೆ ಬಾಕಿ ಇದೆ. ಈ ನಡುವೆಯೇ ಇದೀಗ 243 ವಾರ್ಡ್ಗಳಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.