ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್​

bbmp
Published on

ಬೆಂಗಳೂರು: ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆ ಪ್ರಶ್ನಿಸಿದ್ದ ಎಲ್ಲಾ ಅರ್ಜಿಗಳನ್ನು ಹೈಕೋರ್ಟ್​ ವಜಾ ಮಾಡಿದೆ.

ಶಾಸಕ ಜಮೀರ್ ಅಹಮ್ಮದ್ ಖಾನ್, ಸತೀಶ್ ರೆಡ್ಡಿ, ಸೌಮ್ಯಾ ರೆಡ್ಡಿ ಸೇರಿದಂತೆ 10ಕ್ಕೂ ಅಧಿಕ ಮಂದಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ಪ್ರತಿಪಕ್ಷಗಳ ಶಾಸಕರಿರುವ ಕ್ಷೇತ್ರಗಳ ವಾರ್ಡ್ ಸಂಖ್ಯೆ ಕಡಿತಗೊಳಿಸಲಾಗಿದೆ, ಆಡಳಿತ ಪಕ್ಷದ ಶಾಸಕರಿರುವ ವಾರ್ಡ್ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ಆರೋಪಿಸಿದ್ದ ಅರ್ಜಿದಾರರು ವಾರ್ಡ್ ಪುನರ್ವಿಂಗಡಣೆಯನ್ನು ಪ್ರಶ್ನಿಸಿದ್ದರು. ಆದರೆ ಈ ವಾದವನ್ನು ನ್ಯಾ.ಹೇಮಂತ್ ಚಂದನ್ ಗೌಡರ್ ಮಾನ್ಯ ಮಾಡಲಿಲ್ಲ.

ಎಲ್ಲಾ ಪಕ್ಷಗಳ ಸರ್ಕಾರಗಳೂ ತಮ್ಮ ಅನುಕೂಲಕ್ಕೆ ತಕ್ಕಂತೆ ಪುನರ್ವಿಂಗಡಣೆ ಮಾಡುತ್ತಿವೆ. ಆದರೆ ಬಿಬಿಎಂಪಿ ಚುನಾವಣೆ ಶೀಘ್ರ ನಡೆಯುವ ಅಗತ್ಯವನ್ನೂ ಗಮನಿಸಬೇಕು ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

ಇನ್ನು, ಬಿಬಿಎಂಪಿ ವಾರ್ಡ್ ಮೀಸಲಾತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇದೇ 21ಕ್ಕೆ ಮುಂದೂಡಿದೆ. ಕೆಲ ಕ್ಷೇತ್ರಗಳಲ್ಲಿ ಎಲ್ಲಾ ವಾರ್ಡ್‌ಗಳು ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಹೀಗೆ ಮೀಸಲಾತಿ ನೀಡಲು ಸರ್ಕಾರದ ಮಾನದಂಡವೇನು ಎಂದು ಅರ್ಜಿದಾರರು ಪ್ರಶ್ನಿಸಿದ್ದು, ಇದಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net