

ಬಳ್ಳಾರಿ: 2019ರಲ್ಲಿ ನಡೆದ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬರ ಜೀವ ಕಾಪಾಡಿದ ರೈಲ್ವೇ ಕಾನ್ಸ್ಟೆಬಲ್ ಎಸ್.ರಫೀ ಅವರಿಗೆ "ಜೀವನ್ ರಕ್ಷ" ರಾಷ್ಟ್ರಪತಿ ಪದಕ ನೀಡಿ ಗೌರವಿಸಲಾಗಿದೆ.
ಚಲಿಸುವ ರೈಲಿಗೆ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ ಮಾಡಿದ ಹಿನ್ನೆಲೆಯಲ್ಲಿ ಈ ಪದವಿ ಲಭಿಸಿದೆ. ಈ ಪ್ರಶಸ್ತಿಗೆ ಕರ್ನಾಟಕದಿಂದ ಆಯ್ಕೆಯಾದ ಏಕೈಕ ವ್ಯಕ್ತಿಯಾಗಿದ್ದಾರೆ ರಫೀ.
2019ರಲ್ಲಿ ಬಳ್ಳಾರಿಯ ರೈಲ್ವೇ ನಿಲ್ದಾಣದಲ್ಲಿ ಚಲಿಸುವ ರೈಲು ಹತ್ತುವ ಸಮಯದಲ್ಲಿ ಪ್ರಯಾಣಿಕರೊಬ್ಬರು ಜಾರಿ ಬಿದ್ದಿದ್ದರು. ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ರಕ್ಷಣೆ ಮಾಡಿದ್ದರು ರಫೀ. ಇವರು ಬಳ್ಳಾರಿ ನಗರದ ಕೇಂದ್ರ ರೈಲ್ವೇ ರಕ್ಷಣದಳದ ಕಾನ್ಸ್ಟೆಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಇವರಿಗೆ ಪ್ರಮಾಣ ಪತ್ರ, ಮೆಡಲ್ ಹಾಗೂ 1 ಲಕ್ಷ ರೂಪಾಯಿ ಚೆಕ್ ನೀಡಲಾಗಿದೆ.
ಘಟನೆಯ ಸಂಪೂರ್ಣ ಸನ್ನಿವೇಶ ನಿಲ್ದಾಣದ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಅದರ ವಿಡಿಯೋ ಇಲ್ಲಿದೆ ನೋಡಿ: