ಬಿಜೆಪಿಯಲ್ಲಿ ಗರಂ ಗರಂ ವಾತಾವರಣ- ಈಶ್ವರಪ್ಪ ವಿರುದ್ಧ ಸಿಡಿದೆದ್ದ ಸಚಿವ- ಶಾಸಕರು

bsy eshwarappa
Published on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪಕ್ಷದ ವರಿಷ್ಠರು ಹಾಗೂ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಸಚಿವ, ಬಿಜೆಪಿ ಶಾಸಕರು ಸಿಡಿದೆದ್ದಿದ್ದಾರೆ.

ಯಾವುದೇ ತಪ್ಪು ಮಾಡದ ಸಿಎಂ ಬಿಎಸ್ ವೈ ತಪ್ಪು ಮಾಡಿದ್ದಾರೆ ಎಂದು ಹಿರಿಯ ಸಚಿವರಾಗಿ ಈಶ್ವರಪ್ಪ ಆರೋಪಿಸಿರುವುದು ಸರಿಯಲ್ಲವೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಯಾವುದೇ ವಿಷಯ ಚರ್ಚಿಸುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅವಕಾಶವಿದೆ. ಆದರೆ ಈ ಸಭೆಯಲ್ಲಿ ಯಾವುದೇ ವಿಷಯ ಪ್ರಸ್ತಾಪಿಸದೆ ನೇರವಾಗಿ ರಾಜ್ಯಪಾಲರಿಗೆ ದೂರು ಸಲ್ಲಿಸಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅನುದಾನವನ್ನು ಪಕ್ಷಾತೀತವಾಗಿ ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿದ್ದು, ಇದರಲ್ಲಿ ಸಿಎಂ ಬಿಎಸ್ ವೈ ತಪ್ಪೇನಿದೆ ? ಎಂದು ಶಾಸಕರಾದ ಮಹೇಶ್ ಕುಮಟಳ್ಳಿ, ಪರಣ್ಣ ಮುನವಳ್ಳಿ, ಮಹದೇವಪ್ಪ ಯಾದವಾಡ, ಅರುಣ್ ಕುಮಾರ್ ಪೂಜಾರಿ ಮರು ಪ್ರಶ್ನಿಸಿದ್ದಾರೆ.

ಉಪ ಚುನಾವಣೆ ಹೊಸ್ತಿಲಲ್ಲಿ ಪಕ್ಷಕ್ಕೆ ಮುಜುಗರವಾಗುವಂತೆ ನಡೆದುಕೊಂಡಿರುವುದು ಶೋಭೆ ತೋರುವುದಿಲ್ಲ. ನಾವೂ ವರಿಷ್ಠರಿಗೆ ದೂರು ಸಲ್ಲಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net