ಹತ್ತು ದಿನಗಳಲ್ಲಿ ಹತ್ತು ಮಂದಿಯನ್ನು ಬಲಿ ಪಡೆದ ಬ್ಲ್ಯಾಕ್‌ ಫಂಗಸ್‌- 27 ಜಿಲ್ಲೆಗಳಲ್ಲಿ 451 ಜನರ ಸಾವು

Black Fungus
Published on

ಬೆಂಗಳೂರು: ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ 10 ಮಂದಿ ಬ್ಲ್ಯಾಕ್ ಂಗಸ್ (ಕಪ್ಪು ಶಿಲೀಂಧ್ರ) ಸೋಂಕಿತರು ಚಿಕಿತ್ಸೆ ಲಿಸದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಈವರೆಗೂ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 451ಕ್ಕೆ ಏರಿಕೆಯಾಗಿದೆ.

ಕೊಡಗು, ರಾಮನಗರ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ 27 ಜಿಲ್ಲೆಗಳಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ. ಸೋಂಕಿತರ ಆಸ್ಪತ್ರೆ ದಾಖಲಾತಿ ವಿಳಂಬ ಸೇರಿದಂತೆ ನಾನಾ ಕಾರಣಗಳಿಂದ ಈವರೆಗೂ 451 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ ಯಾವುದೇ ಹೊಸ ಸೋಂಕು ಪ್ರಕರಣಗಳು ವರದಿಯಾಗಿಲ್ಲ. ಮೇ ನಲ್ಲಿ ಕಾಣಿಸಿಕೊಂಡ ಬ್ಲ್ಯಾಕ್ ಂಗಸ್ ಪ್ರಕರಣಗಳು ಈವರೆಗೂ 3,878 ಮಂದಿಯನ್ನು ಬಾಧಿಸಿದೆ. ಒಟ್ಟು ಸೋಂಕಿತರಲ್ಲಿ ಶೇ. 30ಕ್ಕೂ ಅಧಿಕ ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿದ್ದು, ಈವರೆಗೆ 1,222 ಮಂದಿ ಪ್ರಕರಣಗಳು ದೃಢಪಟ್ಟಿದ್ದು, 153 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲಾವಾರು ಸೋಂಕು ಪ್ರಕರಣಗಳು:

ಧಾರವಾಡದಲ್ಲಿ 345, ವಿಜಯಪುರದಲ್ಲಿ 235, ಕಲಬುರ್ಗಿಯಲ್ಲಿ 216, ಬಳ್ಳಾರಿಯಲ್ಲಿ 173, ಚಿತ್ರದುರ್ಗದಲ್ಲಿ 167, ಬೆಳಗಾವಿಯಲ್ಲಿ 159, ರಾಯಚೂರಿನಲ್ಲಿ 142, ಮೈಸೂರಿನಲ್ಲಿ 137, ಬಾಗಲಕೋಟೆಯಲ್ಲಿ 131, ದಾವಣಗೆರೆಯಲ್ಲಿ 124, ಕೋಲಾರದಲ್ಲಿ 114 ಹಾಗೂ ದಕ್ಷಿಣ ಕನ್ನಡದಲ್ಲಿ 105 ಸೋಂಕು ದೃಢ ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ನೂರಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ.

ಧಾರವಾಡದಲ್ಲಿ 45, ಬಳ್ಳಾರಿಯಲ್ಲಿ 28, ದಕ್ಷಿಣ ಕನ್ನಡದಲ್ಲಿ 25, ಕಲಬುರ್ಗಿಯಲ್ಲಿ 24, ದಾವಣಗೆರೆ ಹಾಗೂ ಮೈಸೂರಿನಲ್ಲಿ ತಲಾ 20, ಶಿವಮೊಗ್ಗದಲ್ಲಿ 15, ಬಾಗಲಕೋಟೆಯಲ್ಲಿ 13, ರಾಯಚೂರಿನಲ್ಲಿ 12, ಕೋಲಾರ, ಹಾಸನ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ 11 ಹಾಗೂ ಗದಗದಲ್ಲಿ 10 ಮಂದಿ ಮೃತಪಟ್ಟಿದ್ದು, ರಾಜ್ಯದ 12 ಜಿಲ್ಲೆಗಳಲ್ಲಿ ಮರಣ ಪ್ರಕರಣಗಳ ಸಂಖ್ಯೆ ಎರಡಂಕಿ ಇದ್ದು, ಐದು ಜಿಲ್ಲೆಗಳಲ್ಲಿ ಸಾವಿನ ಸಂಖ್ಯೆ ಒಂದಂಕಿಗೆ ವರದಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net