ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಬಂದಿದ್ದ ನಿಡಸೋಸಿ ದುರದುಂಡೇಶ್ವರ ಮಠದ ಸ್ವಾಮೀಜಿ ಕಾರು ಅಪಘಾತ

swamijee
Published on

ಬೆಳಗಾವಿ: ಬರ್ಬರವಾಗಿ ಹತ್ಯೆಯಾದ ಸರಳ ವಾಸ್ತು ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ತೆರಳಿದ್ದ ನಿಡಸೋಸಿ ಜಗದ್ಗುರು ಪಂಚಮ ಶಿವಲಿಂಗೇಶ್ವರ್ ಸ್ವಾಮೀಜಿ ಕಾರು ಅಪಘಾತವಾಗಿದೆ. ಅದೃಷ್ಟವಶಾತ್​ ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿವಲಿಂಗೇಶ್ವರ್ ಸ್ವಾಮೀಜಿ ಅವರು,ಬೆಳಗಾವಿ‌ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿಯ ಪ್ರಸಿದ್ಧ ದುರದುಂಡೇಶ್ವರ ಮಠದ ಸ್ವಾಮೀಜಿಯಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿಯೇ ಪ್ರಖ್ಯಾತಿ ಹೊಂದಿರುವ ಸಂಸ್ಥಾನ ಮಠವಿದು.

ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಮುಗಿಸಿ ಹುಬ್ಬಳ್ಳಿಗೆ ವಾಪಸ್​ ಬರುವ ವೇಳೆ ತೇಗುರ ಕ್ರಾಸ್ ಬಳಿ ಸ್ವಾಮೀಜಿ ಕಾರು ಪಲ್ಟಿಯಾಗಿದೆ. ಸ್ವಾಮೀಜಿ ಅವರು ಬೆಳಗಾವಿಯ ಕೆ.ಎಲ್.ಈ ಆಸ್ಪತ್ರೆಗೆ ಬಂದಿದ್ದು, ಆರೋಗ್ಯ ತಪಾಸಣೆ ಬಳಿಕ ಮಠಕ್ಕೆ ತೆರಳಲಿರುವುದಾಗಿ ತಿಳಿದುಬಂದಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net