ಜೂನ್ 7ರಿಂದ ನಡೆಯಬೇಕಿದ್ದ ಸಿಇಟಿ ಪರೀಕ್ಷೆ ಮುಂದೂಡಿದ ಶಿಕ್ಷಣ ಇಲಾಖೆ

Raichur FDA Exam Writing
Published on

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಯನ್ನು ಶಿಕ್ಷಣ ಇಲಾಖೆ ಮುಂದೂಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಸುತ್ತೋಲೆ ಪ್ರಕಾರ ಆಗಸ್ಟ್ 28 ರಿಂದ 30ರವರೆಗೆ ಪರೀಕ್ಷೆ ನಡೆಸಲು ನಿರ್ಧಾರ ಮಾಡಿದೆ. ಈ ಮೊದಲು ಜು.7ರಿಂದ 9ರವರೆ ಪರೀಕ್ಷೆ ನಡೆಸಲು ವೇಳಾಪಟ್ಟಿ ರೂಪಿಸಿತ್ತು. ಇದೀಗ ಕರೋನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿದೆ.

ಅಲ್ಲದೆ, ಶೀಘ್ರದಲ್ಲೇ ಅರ್ಜಿ ಆಹ್ವಾನ ಪ್ರಕ್ರಿಯೆಗೆ ಚಾಲನೆ ನೀಡುವುದಾಗಿ ತಿಳಿಸಿದೆ. ಪ್ರತಿ ವರ್ಷ ಸುಮಾರು 1.90 ಲಕ್ಷ ವಿದ್ಯಾರ್ಥಿಗಳು ಸಿಇಟಿ ತೆಗೆದುಕೊಳ್ಳುತ್ತಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net