ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವರ್ಧಂತಿ ಸಡಗರ: ಯದುವೀರ್​ ಒಡೆಯರ್​ ಚಾಲನೆ

chamundi
Published on

ಮೈಸೂರು: ಆಷಾಢ ಮಾಸದ ನಾಲ್ಕನೇ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ ಸಡಗರದಿಂದ ನೆರವೇರಿತು. ಉತ್ಸವಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು. ರಾಣಿ ತ್ರಿಷಿಕಾ ಕುಮಾರಿ ಒಡೆಯರ್ ಉಪಸ್ಥಿತರಿದ್ದರು. ದೇವಾಲಯ ಒಳಾಂಗಣದಲ್ಲಿ ಚಾಮುಂಡೇಶ್ವರಿ ದೇವಿ ಮೆರವಣಿಗೆ ನಡೆಯಿತು.

ಕರೊನಾ ಕಾರಣಕ್ಕೆ ಗಣ್ಯರಿಗೆ‌ ಮಾತ್ರ ಬೆಟ್ಟಕ್ಕೆ ಪ್ರವೇಶ ನೀಡಲಾಗಿತ್ತು. ಈ ಕುರಿತು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಆದರೆ ಈ ಆದೇಶವನ್ನು ಕಡೆಗಣಿಸಿದ ಭಕ್ತರು ಇಲ್ಲಿ ತಂಡೋಪತಂಡವಾಗಿ ಆಗಮಿಸಿದ್ದರು.

ಕರೊನಾ ಎಚ್ಚರಿಕೆ ಇದ್ದರೂ ಸಾಮಾಜಿಕ ಅಂತರ ಮರೆತ ಜನರು ನೂರಾರು ವಾಹನಗಳಲ್ಲಿ ಸಾವಿರಕ್ಕೂ ಅಧಿಕ ಮಂದಿ ಬೆಟ್ಟಕ್ಕೆ ಆಗಮಿಸಿದ್ದರು. ಬೆಟ್ಟದ ತಪ್ಪಲಲ್ಲಿ ವಾಹನಗಳನ್ನು ಪೊಲೀಸರು ತಡೆಹಿಡಿದರು. ಈ ಸಂದರ್ಭದಲ್ಲಿ ಭಕ್ತರಿಂದ ಆಕ್ರೋಶವೂ ವ್ಯಕ್ತವಾಯಿತು. ಪೊಲೀಸರು ತಮಗೆ ಬೇಕಾದವರನ್ನು ಮಾತ್ರ ಬಿಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net