

ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಂತಾಮಣಿ ತಾಲೂಕಿನ ಅಂಬಾಜಿ ದುರ್ಗ ಹೋಬಳಿಯ ನಾರಾಯಣಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್ (45), ಹನುಮಕ್ಕ (35) ಹಾಗೂ ಇವರ ಮಕ್ಕಳಾದ ಮನಿರಾಜು (20) ಮತ್ತು 14 ವರ್ಷದ ಮುರಳಿ ವಿಷ ಸೇವಿಸಿದ್ದಾರೆ. ಇದರಲ್ಲಿ ಮುರಳಿ ಮೃತಪಟ್ಟಿದ್ದು, ಉಳಿದವ ಸ್ಥಿತಿ ಗಂಭೀರವಾಗಿದೆ. ಇದನ್ನು ಕೋಲಾರದ ಎಸ್ಎನ್ಆರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಅಲ್ಲಿ ಚಿಕಿತ್ಸೆ ನಡೆಯುತ್ತಿದೆ.
ಕುಟುಂಬದ ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.