ಪ್ರವೀಣ್​ ಹತ್ಯೆ: ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯದಂಗಡಿ ಕ್ಲೋಸ್​- ಕುಟುಂಬಸ್ಥರ ಭೇಟಿಯಾಗಲಿರುವ ಸಿಎಂ

praveenCM
Published on

ಮಂಗಳೂರು: ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಮನೆಗೆ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ.

ಸಂಜೆ 4.25ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ರಸ್ತೆ ಮೂಲಕ ಬೆಳ್ಳಾರೆಯ ನೆಟ್ಟಾರ್ ನಲ್ಲಿರುವ ಪ್ರವೀಣ್ ಮನೆಗೆ ಸಂಜೆ 6.30ಕ್ಕೆ ಭೇಟಿ ನೀಡಲಿರುವುದಾಗಿ ತಿಳಿದುಬಂದಿದೆ.

ಪ್ರವೀಣ್ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಮುಖ್ಯಮಂತ್ರಿಗಳು, ರಾತ್ರಿ10.15 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.

ಪ್ರವೀಣ್​ ಹತ್ಯೆ ಖಂಡಿಸಿ, ಭಾರಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯಮಾರಾಟ ಬಂದ್ ಮಾಡಲು ಆದೇಶಿಸಲಾಗಿದೆ. ನಾಳೆ (ಜುಲೈ 29) ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದ ಅಂಗಡಿಗಳನ್ನು ಮುಚ್ಚಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಪುತ್ತೂರು ಉಪವಿಭಾಗ ವ್ಯಾಪ್ತಿಯಾಗಿರುವ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ವ್ಯಾಪ್ತಿಗೆ ಆದೇಶ ಜಾರಿಯಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net