ಸಿಎಂ ಬೊಮ್ಮಾಯಿ‌ ಹಾವೇರಿ, ಧಾರವಾಡ ಜಿಲ್ಲಾ ಪ್ರವಾಸ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

bommai
Published on

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಈಗಾಗಲೇ ಅವರು ತೆರಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಶಿಗ್ಗಾವಿಗೆ ತೆರಳಲಿರುವ ಸಿಎಂ ಬೊಮ್ಮಾಯಿ ಅವರು, ಶಿಗ್ಗಾವಿ ಮತ್ತು ಸವಣೂರಿನಲ್ಲಿ ವಕೀಲರ ಸಂಘಗಳ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಹಾವೇರಿ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣವಾಗಿರುವ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಲಿದ್ದಾರೆ.

ಬಳಿಕ ಸಂಜೆ 5-30ಕ್ಕೆ ಹಾವೇರಿಯ ಪ್ರವಾಸಿ ಮಂದಿರದ ಬಳಿ ನಿರ್ಮಿಸಲಾಗಿರುವ ಸಂಚಾರಿ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ.

ಈ ಎಲ್ಲ ಕಾರ್ಯಕ್ರಮಗಳ ನಂತರ ಸಂಜೆ ಅವರು, ಹಾವೇರಿಯಿಂದ ರಸ್ತೆ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಮರಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net