

ಬೆಂಗಳೂರು: ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ.
ದೇವನಹಳ್ಳಿ ಮೂಲದ ಶಕುಂತಲ ( 40 ) ಮೃತ ದುರ್ದೈವಿ. ಪತಿಯ ಜತೆ ಇವರು ಬೈಕ್‌ನಲ್ಲಿ ಏರ್‌ಪೋರ್ಟ್‌ಗೆ ಕೆಲಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರ ಪತಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ.
ಏರ್ಪೋಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.