ಬೆಂಗಳೂರಿಗೆ ಆಗಮಿಸಿದ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು- ಸ್ವಾಗತ ಕೋರಿದ ಸಿಎಂ

murmru
Published on

ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಕರ್ನಾಟಕದ ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯಲು ಬೆಂಗಳೂರಿಗೆ ಆಗಮಿಸಿದ್ದಾರೆ.

ಭಾರತದ ರಾಷ್ಟ್ರಪತಿ ಸ್ಥಾನಕ್ಕೆ ಇದೇ 18 ರಂದು ಚುನಾವಣೆ ನಡೆಯಲಿದ್ದು, ದ್ರೌಪದಿ ಮುರ್ಮು ಅವರು ಪ್ರಚಾರಾರ್ಥವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಮುರ್ಮು ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಭಿವೃದ್ಧಿ ಸಚಿ ಬಸವರಾಜ್ ಬೈರತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಗರದ ಖಾಸಗಿ ನಡೆಯಲಿರುವ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಮಹಿಳಾ ಮೋರ್ಚಾ ಟೀಮ್ ನಿಂದ ಸಾವಿರಾರು ಕಾರ್ಯಕರ್ತರನ್ನು ಸೇರಿಸಲು ಆಲೋಚಿಸಲಾಗಿದೆ. ಸಂಜೆ ನಾಲ್ಕು ಗಂಟೆಗೆ ಬಿಜೆಪಿ ಶಾಸಕರು ಮತ್ತು ಸಂಸದರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾಗಿಯಾಗಲಿರುವ ಮುರ್ಮು ಚುನಾವಣೆಯಲ್ಲಿ ತಮ್ಮ ಪರ ಮತ ಚಲಾಯಿಸಲು ಕೋರಲಿದ್ದಾರೆ ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net