ಶವದ ಮೈಮೇಲೆ ಅಸಲಿ ಬದಲು ನಕಲಿ ಚಿನ್ನ! ಬೆಂಗಳೂರಿನ ಆಸ್ಪತ್ರೆಯಲ್ಲಿ ಗೋಲ್‌ಮಾಲ್‌? ದೂರು ದಾಖಲು

Dead Body
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಅನಾರೋಗ್ಯದ ನಿಮಿತ್ತ ಇಲ್ಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಮಹಿಳೆಯ ಮೈಮೇಲೆ ಇದ್ದ ಚಿನ್ನದ ಜಾಗದಲ್ಲಿ ನಕಲಿ ಚಿನ್ನ ಇರುವ ಪ್ರಕರಣ ಬೆಳಕಿಗೆ ಬಂದಿದೆ.

1.3 ಲಕ್ಷ ಮೌಲ್ಯದ 38 ಗ್ರಾಂ ಚಿನ್ನಾಭರಣ‌ ಕಳ್ಳತನ ಮಾಡಿರುವ ಆರೋಪದ ಮೇಲೆ ಇದೀಗ ಆಸ್ಪತ್ರೆ ವಿರುದ್ಧ ದೂರು ದಾಖಲಾಗಿದೆ. ಭಾಗ್ಯಮ್ಮ ಎಂಬುವವರನ್ನು ಇದೇ 18 ರಂದು ಯಲಹಂಕದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು 25 ರಂದು ಮೃತಪಟ್ಟಿದ್ದಾರೆ. ಆದರೆ ಪತ್ನಿಯ ಮೈಮೇಲೆ ಇದ್ದ ಚಿನ್ನ ನಕಲಿಯಾಗಿರುವುದನ್ನು ಅವರ ಪತಿ ಕೃಷ್ಣಪ್ಪ ಗಮನಿಸಿದ್ದಾರೆ. ಈ ಬಗ್ಗೆ ಇದೀಗ ದೂರು ದಾಖಲಾಗಿದೆ.

ಪತ್ನಿಯ ಮೈಮೇಲಿದ್ದ ಚಿನ್ನಾಭರಣವನ್ನು ಆಸ್ಪತ್ರೆಯ ಸಿಬ್ಬಂದಿ ಕಳ್ಳತನ ಮಾಡಿರುವುದಾಗಿ ಅವರು ಆರೋಪಿಸಿದ್ದಾರೆ. ಸದ್ಯ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net